ಕಲಬುರಗಿ | ನಾಳೆಯಿಂದ ಎಬಿವಿಪಿ ರಾಜ್ಯ ಸಮ್ಮೇಳನ: ಸಚಿನ್ ಕುಳಗೇರಿ

Update: 2024-12-26 09:50 GMT

ಕಲಬುರಗಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ಪ್ರಾಂತದ 44ನೇ ರಾಜ್ಯ ಸಮ್ಮೇಳನವು ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಡಿ.27, 28 ಮತ್ತು 29ರಂದು ನಡೆಯಲಿದೆ ಎಂದು ಎಬಿವಿಪಿ ಕರ್ನಾಟಕ ಉತ್ತರ ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸಮ್ಮೇಳನದ ಉದ್ಘಾಟನೆಯಲ್ಲಿ ಜಯದೇವ್ ಆಸ್ಪತ್ರೆ ಮಾಜಿ ನಿರ್ದೇಶಕ, ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ, ಪದ್ಮಶ್ರೀ ಪುರಸ್ಕೃತ ನಾಡೋಜ ಮುನಿ ವೆಂಕಟಪ್ಪನವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ವೇಳೆ ಎಬಿವಿಪಿಯ ರಾಷ್ಟ್ರೀಯ ಕಾರ್ಯದರ್ಶಿ ಶ್ರವಣ್ ಕುಮಾರ್ ಕೂಡ ಉಪಸ್ಥಿತಿ ಇರಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂವಿಧಾನ, ಶರಣರ ಮತ್ತು ಕಲ್ಯಾಣ ಕರ್ನಾಟಕದ ವಿಮೋಚನ ಹೋರಾಟದ ಕುರಿತು ಹಾಗೂ ವಿದ್ಯಾರ್ಥಿ ಪರಿಷತ್ ಚಟುವಟಿಕೆಗಳನ್ನು ಒಳಗೊಂಡಿರುವ ಪ್ರದರ್ಶನಯನ್ನು ಕರ್ನಲ್ ಶರಣಪ್ಪ ಸೀಕೆನ್ಪುರೆ ಅವರು ಉದ್ಘಾಟಿಸಲಿದ್ದಾರೆ. 28ರಂದು ಸಂಜೆ 4 ಗಂಟೆಗೆ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಿಂದ ಶರಣಬಸವೇಶ್ವರ ದೇವಸ್ಥಾನದವರೆಗೆ ಬೃಹತ್ ಶುಭ ಯಾತ್ರೆ ನಡೆಯಲಿದೆ ಬಳಿಕ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಸಭೆಯಲ್ಲಿ ಎಬಿವಿಪಿಯ ನಾಯಕರು ಮಾತನಾಡಲಿದ್ದಾರೆ ಎಂದರು.

ಈ ಸಮ್ಮೇಳನದಲ್ಲಿ ಎಬಿವಿಪಿಯ ರಾಷ್ಟ್ರೀಯ ಪ್ರಮುಖರು, ರಾಜ್ಯದ ಪದಾಧಿಕಾರಿಗಳು, ಶಿಕ್ಷಣ ತಜ್ಞರು, ಶಿಕ್ಷಕರು ಸೇರಿದಂತೆ 1,100 ಅಧಿಕ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಸವರಾಜ್ ದೇಶಮುಖ್ ಅಲ್ಲಂಪ್ರಭು ಗುಡ್ಡ, ದಯಾಘನ್ ಧಾರವಾಡಕರ್, ಸೂರ್ಯಕಾಂತ್ ಮತ್ತಿತರರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News