ಕಲಬುರಗಿ : ಕಾರು, ಸಾರಿಗೆ ಬಸ್ ನಡುವೆ ಅಪಘಾತ: ಓರ್ವ ಗಂಭೀರ

Update: 2024-02-08 10:40 GMT

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ ರಸ್ತೆಯ ಶಹಾಬಾದ್ ಕ್ರಾಸ್ ಬಳಿ ನಡೆದಿದೆ.

ಗ್ರಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಸರು ತಿಳಿದುಬಂದಿಲ್ಲ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕಲಬುರಗಿ ಸಂಚಾರಿ ಪೋಲಿಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ- ೧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News