ಕಲಬುರಗಿ | ಆಳಂದ ಟಿಎಚ್ಒ ಡಾ.ಸುಶೀಲಕುಮಾರ ಅಂಬೂರೆ ಅಮಾನತು

Update: 2024-11-17 11:38 GMT

ಕಲಬುರಗಿ : ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಆಳಂದ ತಾಲ್ಲೂಕಿನ ಆರೋಗ್ಯ ಅಧಿಕಾರಿ(ಟಿಎಚ್ಒ) ಡಾ.ಸುಶೀಲಕುಮಾರ ಅಂಬೂರೆ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ ಕೆ.ಬಿ. ಅವರು ತಿಳಿಸಿದ್ದಾರೆ.

ತಾಲ್ಲೂಕಿನ ವೈದ್ಯರು ಹಾಗೂ ಸಿಬ್ಬಂದಿಗೆ ಕಿರುಕುಳ ನೀಡಿ ಹಣವಸೂಲಿ ಮಾಡುತ್ತಿದ್ದರು ಎಂಬ ಆರೋಪ ಮತ್ತು ರಾಜಕೀಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮತ್ತೊಂದು ಆರೋಪದ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ಸೂಚಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News