ಕಲಬುರಗಿ | ಪುಸ್ತಕ ಆಯ್ಕೆಗೆ ಅರ್ಜಿ ಆಹ್ವಾನ

ಕಲಬುರಗಿ : 2018-19ನೇ ಸಾಲಿನ ಜನವರಿ-2018 ರಿಂದ 2023-24ನೇ ಸಾಲಿನ ಡಿಸೆಂಬರ್-2023 ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ/ ಲಲಿತಕಲೆ/ ವಿಜ್ಞಾನ/ ಮಾನವಿಕ/ ವೈದ್ಯಕೀಯ/ ತಾಂತ್ರಿಕ/ ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ/ಆಂಗ್ಲ/ಇತರೆ ಭಾರತೀಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಎರಡನೇ ಹಂತದಲ್ಲಿ ಪುಸ್ತಕಗಳ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಟ್ಟದ ಪುಸ್ತಕ ಆಯ್ಕೆ ಖರೀದಿ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆ.1 ರಿಂದ ಆರಂಭವಾಗಿದ್ದು, ಪುಸ್ತಕಗಳು ಜನವರಿ-2018ರಿಂದ ಡಿಸೆಂಬರ್-2023 ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರಬೇಕು. ಮರು ಮುದ್ರಣವಾದಲ್ಲಿ ಹತ್ತು ವರ್ಷಗಳ ಅಂತರವಿರಬೇಕು. ಈ ಬಗ್ಗೆ ದೃಢೀಕರಣ ಪತ್ರವನ್ನು ನೀಡಬೇಕು. ನಿಗದಿತ ಅರ್ಜಿ ನಮೂನೆಯನ್ನು ಕಾರ್ಯದರ್ಶಿಗಳು, ಜಿಲ್ಲಾ ಮಟ್ಟದ ಪುಸ್ತಕ ಖರೀದಿ ಸಮಿತಿ ಜಿಲ್ಲಾ ಕೇಂದ್ರ ಗ್ರಂಥಾಲಯ, ರೂಮ್ ನಂ.26, 3ನೇ ಮಹಡಿ ವಿಕಾಸಸೌಧ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿ, ಕಾಪಿರೈಟ್ನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ ಹಾಗೂ ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಕಡ್ಡಾಯವಾಗಿ ಹಾಗೂ ಮತ್ತಿತರ ದಾಖಲೆಗಳನ್ನು ಲಗತ್ತಿಸಿ 2025ರ ಮಾ.2ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, 3ನೇ ಮಹಡಿ, ರೂಮ್. ನಂ. 26, ಮಿನಿ ವಿಧಾನಸೌಧ ಸ್ಟೇಷನ್ ರಸ್ತೆ, ಕಲಬುರಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-221069 ಸಂಪರ್ಕಿಸಲು ಕೋರಿದೆ.