ಕಲಬುರಗಿ | ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

Update: 2024-12-17 15:07 GMT

ಸಾಂದರ್ಭಿಕ ಚಿತ್ರ

ಕಲಬುರಗಿ : ಪ್ರವಾಸೋದ್ಯಮ ಇಲಾಖೆಯಿಂದ ಪ್ರಸಕ್ತ 2024-25ನೇ ಸಾಲಿನ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಕ್ಷೇತ್ರದ ಸಂಸ್ಥೆಗಳ ಮೂಲಕ ಪ್ರವಾಸೋದ್ಯಮ/ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಕಾರ್ಯಕ್ರಮ ರೂಪಿಸಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಇಲಾಖೆಯ ಕಲಬುರಗಿ ಉಪನಿರ್ದೇಶಕರು ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ

ರಾಜ್ಯದಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್‌ಟ್ಯೂಟ್ ಮತ್ತು ಬೆಂಗಳೂರಿನ ಇನ್ಸ್‌ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಸಂಸ್ಥೆಗಳಲ್ಲಿ ವಸತಿ ಸಹಿತ ತರಬೇತಿ ನೀಡಲು ಉದ್ದೇಶಿಸಲಾಗಿರುತ್ತದೆ.

ತರಬೇತಿ ಪಡೆಯಲು ಆಸಕ್ತಿ ಇರುವ ಅರ್ಹ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ಕಲಬುರಗಿ ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದ ಭರ್ತಿ ಮಾಡಿದ ಅರ್ಜಿಯೊಂದಿಗೆ‌ ವಿದ್ಯಾರ್ಹತೆ ದಾಖಲೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಲಗತ್ತಿಸಿ ಇದೇ ಕಚೇರಿಗೆ ಡಿ.28 ರೊಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ತರಬೇತಿ ಕಾರ್ಯಕ್ರಮಗಳ ವಿವರ :

15 ವಾರಗಳ ಅವಧಿಯ ಫುಡ್ ಬೆವರೇಜ್ ಸರ್ವಿಸ್ ಸ್ಟೀವಾರ್ಡ್ ತರಬೇತಿಗೆ 10ನೇ ತರಗತಿ, 15 ವಾರಗಳ ಅವಧಿಯ ರೂಮ್ ಅಟೆಂಡೆಂಟ್ ತರಬೇತಿಗೆ 5ನೇ ತರಗತಿ ಹಾಗೂ 16 ವಾರಗಳ ಅವಧಿಯ ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಗೆ 12ನೇ ತರಗತಿ ಹಾಗೂ 20 ವಾರಗಳ ಅವಧಿಯ ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ 8ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಸತಿ ಸಹಿತ ಈ ಎಲ್ಲಾ ತರಬೇತಿಗೆ ಅರ್ಜಿ ಸಲ್ಲಿಸಬಯಸುವವರು 20 ರಿಂದ 45 ವರ್ಷ ವಯೋಮಾನದವರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News