ಕಲಬುರಗಿ | ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Update: 2025-04-25 18:42 IST
ಕಲಬುರಗಿ | ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
  • whatsapp icon

ಕಲಬುರಗಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕಲಬುರಗಿ ಜಿಲ್ಲೆ ವತಿಯಿಂದ 2025-26ನೇ ಸಾಲಿಗೆ “ಅರಿವು ಶೈಕ್ಷಣಿಕ ಸಾಲ ಯೋಜನೆ”ಯಡಿ ವಿದ್ಯಾಭ್ಯಾಸ ಸಾಲ ಸೌಲಭ್ಯ ಪಡೆಯಲು ಅರ್ಹ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್‌, ಬೌದ್ಧ, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್ ಪರೀಕ್ಷೆ ಮೂಲಕ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್ ಗಳಾದ, ವೈದ್ಯಕಿಯ (ಎಂ.ಬಿ.ಬಿ.ಎಸ್.) ಹಾಗೂ ಬಿ.ಡಿ.ಎಸ್, ಬಿಇ, ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಟೆಕ್ಚರ್, ಫಾರ್ಮಸಿ, ಆಯುಷ್, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕಿಯ ಇಂತಹ ಪದವಿ ಕೋರ್ಸ್ ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ “ಅರಿವು ಶೈಕ್ಷಣಿಕ ಸಾಲ ಯೋಜನೆ” ಯಡಿ ಸಾಲ ಪಡೆಯಲು ವಿದ್ಯಾರ್ಥಿಗಳು ನಿಗಮದ http//kmdconline.karnataka.gov.in ವೆಬ್ ಸೈಟ್‌ನಲ್ಲಿ ಆನ್ ಲೈನ್ ಮೂಲಕ 2025ರ ಮೇ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ವಿದ್ಯಾರ್ಥಿಗಳು ಸದರಿ ಆನ್ ಲೈನ್ ಅರ್ಜಿಯ ಜೊತೆಗೆ ಆನ್ ಲೈನ್ ನಲ್ಲಿ ನೊಂದಾಯಿಸಿರುವ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ಕಚೇರಿಗೆ 2025ರ ಮೇ 31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಎಸ್.ಆರ್. ರೆಸಿಡೆನ್ಸಿ, ಪ್ಲಾಟ್ ನಂ: 1881, ಮೊದಲನೆ ಮಹಡಿ, ಡಾ.ಎಲ್.ಎಸ್.ರಾಠಿ ಆಸ್ಪತ್ರೆ ಎದುರುಗಡೆ, ಹಳೆ ಜೇವರ್ಗಿ ರಸ್ತೆ, ಕಲಬುರಗಿ-585102 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-232425ಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News