ಕಲಬುರಗಿ | ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿಗೆ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಅಯೋಜಿಸಲಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಕಲಬುರಗಿ ಉಪನಿರ್ದೇಶಕರು ತಿಳಿಸಿದ್ದಾರೆ
ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ ಸಿಟ್ಯೂಟ್ (ಎಫ್.ಸಿ.ಐ.) ಮತ್ತು ಬೆಂಗಳೂರಿನ ಇನ್ಸ್ ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಸಂಸ್ಥೆ (ಐ.ಹೆಚ್.ಎಮ್.)ಗಳಲ್ಲಿ ವಸತಿ ಸಹಿತ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ತರಬೇತಿ ಕಾರ್ಯಕ್ರಮಗಳ ವಿವರ : ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವಾರ್ಡ್ ತರಬೇತಿ ಪಡೆಯಲು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಪಡೆಯಲು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 20 ರಿಂದ 45 ವರ್ಷದೊಳಗಿರಬೇಕು. ಈ ತರಬೇತಿ ಪಡೆಯಲು ಆಸಕ್ತಿ ಇರುವ ಅರ್ಹ ಎಸ್.ಸಿ-ಎಸ್.ಟಿ. ಅಭ್ಯರ್ಥಿಗಳು ಕಲಬುರಗಿ ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದ ಭರ್ತಿ ಮಾಡಿದ ಅರ್ಜಿಯೊಂದಿಗೆ ಅಭ್ಯರ್ಥಿಗಳು ಸ್ವಯಂ ಧೃಢೀಕರಿಸಿದ ಆಧಾರ್ ಕಾರ್ಡ್, ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಲಗತ್ತಿಸಿ ಕಚೇರಿಗೆ 2025ರ ಏಪ್ರಿಲ್ 5 ರೊಳಗಾಗಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.