ಕಲಬುರಗಿ | ಸ್ವಚ್ಛ ಭಾರತ ಮಿಷನ್ ಯೋಜನೆಯ ಕುರಿತು ಅರಿವು ಕಾರ್ಯಕ್ರಮ
Update: 2025-04-22 19:45 IST

ಕಲಬುರಗಿ : ಹಾಗರಗಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಜಾದಪೂರ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯ ಸ್ಥಳದಲ್ಲಿ ಸಾಹಸ ಸಂಸ್ಥೆ ಸಹಯೋಗದೊಂದಿಗೆ ಸ್ವಚ್ಛ ಭಾರತ ಮಿಷನ್ ಯೋಜನೆಯ ಕುರಿತು ಅರಿವು ಮೂಡಿಸಲಾಯಿತು.
ಈ ವೇಳೆ ಪಿಡಿಓ ರಾಜೇಶ್ವರಿ ಸಾಹು ಮಾತನಾಡಿ, ಹಸಿ ಕಸ ಮತ್ತು ಒಣ ಕಸ ವನ್ನು ನೀಡಬೇಕು, ಕಸದಿಂದ ರಸ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಕಲಬುರಗಿ, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಹಾಗರಗಾ ಪಣ ತೊಟ್ಟಿವೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಕಸವನ್ನು ಎಲ್ಲಿ ಬೇಕೆಂದಲ್ಲಿ ಎಸೆಯಬಾರದು ಎಂದು ಹೇಳಿದರು.
ಅಲ್ಲದೆ, ಶೌಚಾಲಯಗಳನ್ನು ಕಡ್ಡಾಯವಾಗಿ ಎಲ್ಲರೂ ಬಳಸಬೇಕು, ಗ್ರಾಮಗಳನ್ನು ಸ್ವಚ್ಛವಾಗಿಡಲು ಸಹಕರಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮೀನಾಕ್ಷಿ ಸೂರ್ಯಕಾಂತ ನಾಕಮನ್, ಟಿಇಎ ಹೀನಾ ಐಇಸಿ ದೇವರಾಜ ಸೇರಿದಂತೆ ಪಂಚಾಯತ್ ಸಿಬ್ಬಂದಿಗಳು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು ಇದ್ದರು.