ಕಲಬುರಗಿ | ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕಕ್ಕೆ ಭರತರಾಜ ಸಾವಳಗಿ ನೇಮಕ
Update: 2025-03-17 20:18 IST

ಕಲಬುರಗಿ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ಕಲಬುರಗಿ ಜಿಲ್ಲಾ ಅಧ್ಯಕ್ಷರನ್ನಾಗಿ ಭರತರಾಜ ಸಾವಳಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಅವರು ತಿಳಿಸಿದ್ದಾರೆ.
ತಾವು ಕೂಡಲೇ ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶ್ರಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.