ಕಲಬುರಗಿ | ಕಾರು-ಬೈಕ್ ಮುಖಾಮುಖಿ ಢಿಕ್ಕಿ : ಸವಾರ ಮೃತ್ಯು

Update: 2024-12-06 09:38 GMT

ಕಲಬುರಗಿ : ಆಳಂದ ಪಟ್ಟಣಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿರುವ ಕಡಗಂಚಿ ಕ್ರಾಸ್ ಹತ್ತಿರದಲ್ಲಿ ಕಾರೊಂದು ಬೈಕ್‌ಗೆ ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಬೈಕ್‌ ಸವಾರನ್ನು ಆಳಂದ ತಾಲೂಕಿನ ತಡಕಲ್ ಗ್ರಾಮದ ನಿವಾಸಿ ರಂಜಾನ್ ಮುಕ್ಬುಲ್(19) ಎಂದು ಗುರುತಿಸಲಾಗಿದೆ.

ಮೃತ ಯುವಕ ಆಳಂದ ಪಟ್ಟಣದಲ್ಲಿ ಸ್ಟೋಡಿಯೊ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಮೃತ ರಂಜಾನ್, ಕೆಲಸದ ನಿಮಿತ್ತ ಕಲಬುರಗಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ರಭಸದಿಂದ ಬಂದ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ರಂಜಾನ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ನರೋಣ ಠಾಣೆಯ ಪೊಲೀಸರು ಪ್ರಕರಣದ ಕಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News