ಕಲಬುರಗಿ | ಸಾರಿಗೆ ಬಸ್‌ - ಬೈಕ್ ನಡುವೆ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು

Update: 2024-07-29 08:28 GMT

ಕಲಬುರಗಿ : ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊರವಲಯದ ನಂದಿಕೂರ ಕ್ರಾಸ್ ಬಳಿ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ.

ಮೃತ ಸವಾರರನ್ನು ಜೇವರ್ಗಿ ಶಾಕಾಪುರ ನಿವಾಸಿಗಳಾದ ಅಬಿಶೇಖ್ ಗೌಡ, ತನೂಜ್ ತಳವಾರ ಎಂದು ಗುರುತಿಸಲಾಗಿದೆ. 

ಕಲಬುರಗಿಯಿಂದ ಜೇವರ್ಗಿ ಕಡೆಗೆ ಹೊರಟಿದ್ದ ಬೈಕ್‌ನ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಯಶಪಾಲ್ ರೆಡ್ಡಿ ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಬೈಕ್‌ಗೆ ಬೆಂಕಿ ಹತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ ಎಂದು ಗೊತ್ತಾಗಿದೆ.

ಈ ಕುರಿತು ಕಲಬುರಗಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News