ಕಲಬುರಗಿ | ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಖಡ್ಗಕ್ಕೆ ಹಾನಿ; ಪ್ರತಿಭಟನೆ

Update: 2025-01-05 15:57 GMT

ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಸಮೀಪದಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯ ಖಡ್ಗವನ್ನು ಕಿಡಿಗೇಡಿಗಳು ಮುರಿದು ಹಾಕಿರುವ ಘಟನೆ ರವಿವಾರ ಸಂಜೆ ನಡೆದಿದೆ.

ಘಟನೆಯ ತಿಳಿದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ರಸ್ತೆ ತಡೆ ಮಾಡಿ ಬೃಹತ್ ಪ್ರತಿಭಟಿಸಿದರು.

ಜಗತ್ ವೃತ್ತದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕುರುಬ ಸಮಾಜದ ಮುಖಂಡ ಮಹಾಂತೇಶ್ ಕೌಲಗಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರಿಗೆ ಅಪಮಾನ ಮಾಡುವಂತಹ ಚಟುವಟಿಕೆಗಳು ನಡೆಯುತ್ತಿರುವುದು ಖಂಡಿಸುತ್ತೇವೆ, ಕೂಡಲೇ ಈ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿ, ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಈ ದುರ್ಘಟನೆ ನಡೆಯಬಾರದಿತ್ತು. ಕೂಡಲೇ ಆರೋಪಿಗಳ ಪತ್ತೆಗೆ ಸೂಚಿಸಲಾಗುವುದು. ಪ್ರತಿಮೆಗೆ ಭದ್ರತೆ ನೀಡುವ ಕಾರ್ಯ ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಪೊಲೀಸರು ಭೇಟಿ ನೀಡಿ, ಪ್ರತಿಭಟನಾಕಾರರನ್ನು ಮನವೊಲಿಸಿದರಿಂದ ಪ್ರತಿಭಟನೆ ಕೈಬಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರಾದ ಬಾಲಾಜಿ ಘೊಡಕೆ, ಪರಮೇಶ್, ಶರಣು ಬೇಲೂರ್, ಪ್ರಕಾಶ್ ಕುರನಲ್ಲಿ, ಬೀರಪ್ಪ ಪೂಜಾರಿ, ಪ್ರಕಾಶ್ ಕಾಶಿರಾಯ, ಶಿವಾಜಿ ಪೂಜಾರಿ, ಮಂಜು ನಿಂಬರ್ಗಾ ಸೇರಿದಂತೆ ಹಲವಾರು ಇದ್ದರು.

 

 

 

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News