ಕಲಬುರಗಿ | ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ : ಡಿಸಿ ಬಿ.ಫೌಝಿಯಾ ತರನ್ನುಮ್

Update: 2025-01-11 08:52 GMT

ಕಲಬುರಗಿ : 76ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ತಿಳಿಸಿದರು.

ಅವರು ಗುರುವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲಿ 76ನೇ ಗಣರಾಜ್ಯೋತ್ಸವನ್ನು ಆಚರಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾರಂಭವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಜ.26 ರಂದು ಬೆಳಿಗ್ಗೆ 9ಗಂಟೆಗೆ ಪೋಲಿಸ್ ಗ್ರೌಂಡ್ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಶಾಲಾ ಮಕ್ಕಳು ಎನ್ಸಿಸಿ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೇ ನಾನಾ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲು ಕ್ರಮವಹಿಸಿ ಎಂದರು.

ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ಕಚೇರಿಗಳಲ್ಲಿ ಹಾಗೂ ವಿದ್ಯಾ ಸಂಸ್ಥೆಗಳಲ್ಲಿ ಸಂಬಂಧಪಟ್ಟ ಕಚೇರಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಂದು ಬೆಳಿಗ್ಗೆ 7.30ಗಂಟೆಗೆ ಧ್ವಜಾರೋಹಣ ಮಾಡಿ ಬೆಳಿಗ್ಗೆ 8 ಗಂಟೆ ಒಳಗಾಗಿ ಪೋಲಿಸ್ ಗ್ರೌಂಡ್ನಲ್ಲಿ ಸಾರ್ವಜನಿಕ ಧ್ವಜಾರೋಹಣದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಅಧಿಕಾರಿಗಳು ತಪ್ಪಿದಲ್ಲಿ ಶಿಸ್ತಿನ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲು ತಮ್ಮ ತಮ್ಮ ಇಲಾಖೆಗಳಲ್ಲಿ ಸಾಧನೆ ಮಾಡಿದ ಸಿಬ್ಬಂದಿಗಳ ಯಾದಿಯನ್ನು ಒಂದು ವಾರದ ಮುಂಚೆ ಸಹಾಯಕ ಆಯುಕ್ತ ಕಲಬುರಗಿರವರಿಗೆ ನೀಡಲು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಲಾಯಿತು.

ಜ.25 ಮತ್ತು 26 ರಂದು ನಗರದ ಎಲ್ಲಾ ಅಂಗಡಿ ಮುಗ್ಗಟುಗಳ ಮತ್ತು ವಿವಿಧ ಖಾಸಗಿ ಉದ್ದಿಮಿಗಳ ಕಟ್ಟಡಗಳ ಮಾಲಕರು ದೀಪಾಲಂಕಾರ ವ್ಯವಸ್ಥೆ ಮಾಡಿಕೊಳ್ಳುವಂತೆ ಕೋರಲು ಅಧ್ಯಕ್ಷರು ಹೈದ್ರಾಬಾದ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಇವರಿಗೆ ತಿಳಿಸಲು ಸಭೆಯಲ್ಲಿ ತಿರ್ಮಾನಿಸಲಾಯಿತು.

ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಕ್ಕೆ ಅವಮಾನ ಅಗದಂತೆ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿಸಿಪಿ ಕನಿಕಾ ಸಿಕ್ರಿವಾಲ, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಉಪಆಯುಕ್ತ ಅವಿನಾಶ ಶಿಂಧೆ, ಅಪರ ಜಿಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳಾದ ಕೃಷಿ ಜಿಲ್ಲಾ ಜಿಲ್ಲಾ ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕ ಮುನ್ನವರ ದೌವಲ,ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮ್ಮದ್ ಪಟೇಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಇನಾಂದಾರ, ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News