ಕಲಬುರಗಿ | ಜಿಲ್ಲಾ ಕಸಾಪದಿಂದ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ : ತೇಗಲತಿಪ್ಪಿ

Update: 2024-12-03 11:33 GMT

ಕಲಬುರಗಿ : ಪ್ರಥಮ ಬಾರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಲಬುರಗಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ಮೂರನೇ ವಾರದಲ್ಲಿ ನಗರದ ಕನ್ನಡ ಭವನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದ ಕನ್ನಡ ಭವನದಲ್ಲಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಅನೇಕ ಜನ ಮಹಿಳಾ ಸಾಹಿತಿಗಳಿದ್ದಾರೆ. ಸಾಹಿತ್ಯ ಕೃಷಿಯಿಂದ ನಾಡು-ನುಡಿಗೆ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂದು ಸಾಹಿತ್ಯ ಮತ್ತು ಸಂಸ್ಕೃತಿ ಪರಂಪರೆಯ ಶ್ರೀಮಂತಿಕೆಗೆ ಮಹಿಳಾ ಸಾಹಿತಿಗಳ ಕೊಡುಗೆ ಅಪಾರವಾಗಿದೆ. ಈ ನಿಟ್ಟಿನಲ್ಲಿ ಒಂದು ದಿನದ ಮಹಿಳಾ ಸಾಹಿತ್ಯ ಸಮ್ಮೇಳನವೊಂದನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಡಿಯಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿದ್ದು, ಅರ್ಥಪೂರ್ಣವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಮ್ಮೇಳನದ ಯಶಸ್ವಿಗಾಗಿ ಸ್ವಾಗತ ಸಮಿತಿ, ಗೋಷ್ಠಿಗಳ ಏರ್ಪಡಿಸುವಿಕೆ ಸೇರಿದಂತೆ ಅನೇಕ ವಿಚಾರಗಳ ರೂಪು ರೇಷೆ ಹಾಗೂ ಇನ್ನಿತರ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಮುಂದಿನ ವಾರದಲ್ಲಿ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಹಕ್ಷ ಶರಣರಾಜ ಛಪ್ಪರಬಂದಿ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ, ಶಿಲ್ಪಾ ಜೋಶಿ, ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಲಿಂಗ ಬಾಳಿ, ಕಲ್ಯಾಣಕುಮಾರ ಶೀಲವಂತ, ರಾಜೇಂದ್ರ ಮಾಡಬೂಳ, ಡಾ. ರೆಹಮಾನ್ ಪಟೇಲ್, ವಿನೋದಕುಮಾರ ಜೇನವೇರಿ, ಶಿವಾನಂದ ಪೂಜಾರಿ, ಬಾಬುರಾವ ಪಾಟೀಲ, ಗಣೇಶ ಚಿನ್ನಾಕಾಗಿ, ಜಗದೀಶ ಮರಪಳ್ಳಿ, ಶಿವಶರಣ ಬಡದಾಳ, ದಿನೇಶ ಮದಕರಿ, ರಮೇಶ ಡಿ ಬಡಿಗೆರ, ಹಣಮಂತಪ್ರಭು, ರೇವಣಸಿದ್ದಪ್ಪ ಜೀವಣಗಿ, ಪ್ರಭುಲಿಂಗ ಮೂಲಗೆ, ರಾಜಶೇಖರ ಚೌದ್ರಿ, ಸಂದೀಪ ಭರಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News