ಕಲಬುರಗಿ | ಹಿರಿಯ ನಾಗರಿಕರಿಗೆ ಜಿಲ್ಲಾದ್ಯಂತ ಉಚಿತ ನೇತ್ರ ತಪಾಸಣಾ ಶಿಬಿರ
ಕಲಬುರಗಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲಬುರಗಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಲಿದೆ.
ಜ.10 ರಿಂದ 24 ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಸಾವ೯ಜನಿಕ ಆಸ್ಪತ್ರೆಗಳಲ್ಲಿ ಆಯೋಜಿಸಲಾಗಿದೆ, ಶಿಬಿರದ ಪ್ರಯೋಜನವನ್ನು ಜಿಲ್ಲೆಯ ಹಿರಿಯ ನಾಗರಿಕರು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಹಿರಿಯ ನಾಗರಿಕರು ತಪಾಸಣಾ ಶಿಬಿರಕ್ಕೆ ಹಾಜರಾಗಲು ಬೇಕಾದ ದಾಖಲೆಗಳು :
60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಸಂಬಂಧ ಜನ್ಮ ದಿನಾಂಕ ನಮೂದಾಗಿರುವ ದಾಖಲಾತಿ (ಹಿರಿಯ ನಾಗರಿಕರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶಾಲಾ/ ಕಾಲೇಜು ದಾಖಲಾತಿ, ಇನ್ನಿತರ ಯಾವುದಾದರೊಂದು) ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಾಗಿರಬೇಕು. ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ ತರಬೇಕು. ಹೆಚ್ಚಿನ ವಿವರಗಳಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಥವಾ ಉಚಿತ ಕರೆ 1090 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಅವರು ತಿಳಿಸಿದ್ದಾರೆ.