ಕಲಬುರಗಿ | ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಡಾ.ಶಾರದಾದೇವಿ ಜಾಧವ ಆಯ್ಕೆ

Update: 2024-12-31 14:13 GMT

ಡಾ.ಶಾರದಾದೇವಿ ಜಾಧವ, ತೇಗಲತಿಪ್ಪಿ

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ತಿಂಗಳ ಮೂರನೇ ವಾರದಲ್ಲಿ ನಗರದಲ್ಲಿ ಹಮ್ಮಿಕೊಳ್ಳಲುದ್ದೇಶಿಸಲಾಗಿರುವ ಒಂದು ದಿನದ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ - ಹಿರಿಯ ಲೇಖಕಿ ಡಾ.ಶಾರದಾದೇವಿ ಜಾಧವ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಪರಂಪರೆಯ ಶ್ರೀಮಂತಿಕೆಗೆ ಮಹಿಳಾ ಲೇಖಕಿಯರ ಕೊಡುಗೆ ಅಪಾರವಾಗಿದೆ. ಈ ನಿಟ್ಟಿನಲ್ಲಿ ಒಂದು ದಿನದ ಮಹಿಳಾ ಸಾಹಿತ್ಯ ಸಮ್ಮೇಳನವೊಂದನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಡಿಯಲ್ಲಿ ಅರ್ಥಪೂರ್ಣವಾಗಿ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಾಗುತ್ತಿದ್ದು, ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ರಚಿಸಲ್ಪಟ್ಟಿರುವ ಸ್ವಾಗತ ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಇತ್ತೀಚೆಗೆ ನಡೆದ ಪರಿಷತ್ತಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ, ಶಿಲ್ಪಾ ಜೋಶಿ, ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಲಿಂಗ ಬಾಳಿ, ಕಲ್ಯಾಣಕುಮಾರ ಶೀಲವಂತ, ರಾಜೇಂದ್ರ ಮಾಡಬೂಳ, ವಿನೋದ ಜೇನವೇರಿ, ಶಿವಾನಂದ ಪೂಜಾರಿ, ಡಾ.ರೆಹಮಾನ್ ಪಟೇಲ್, ತಾರಾಚಂದ ಜೈನ್, ಸುನೀಲ ಇಟಗಿ, ದಿನೇಶ ಮದಕರಿ ಸೇರಿ ಅನೇಕರು ಭಾಗವಹಿಸಿದ್ದರು.

ಸಮ್ಮೇಳನಾಧ್ಯಕ್ಷೆ ಡಾ.ಶಾರದಾದೇವಿ ಜಾಧವ ಅವರ ಪರಿಚಯ :

ಇಲ್ಲಿನ ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಶಾರದಾದೇವಿ ಜಾಧವ ಅವರು ಆಳಂದ ತಾಲ್ಲೂಕಿನ ದಣ್ಣೂರ ತಾಂಡಾದಲ್ಲಿ ಜನಿಸಿದ ಇವರು, ಬುಡಕಟ್ಟು ಜನಾಂಗದ ಸುಸಂಸ್ಕೃತ ಮನೆತನದಿಂದ ಬಂದವರಾಗಿದ್ದಾರೆ. ಸ್ತ್ರೀ ಪ್ರಧಾನ ಜನಪದ ಕಥನಗೀತೆಗಳು ಒಂದು ಅಧ್ಯಯನ ಎಂಬ ವಿಷಯದ ಮೇಲೆ ಸಂಶೋಧನಾಧ್ಯಯನ ಕೈಗೊಂಡು ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪಡೆದಿರುತ್ತಾರೆ.

ಡಾ. ಶಾರದಾದೇವಿ ಜಾಧವ ಅವರು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪಿ.ಎಚ್.ಡಿ. ಮಾರ್ಗದರ್ಶಕರೂ ಆಗಿದ್ದಾರೆ. ಇವರ ಮಾರ್ಗದರ್ಶನದಲ್ಲಿ ಸುಮಾರು 10 ಕ್ಕೂ ಜನ ಸಂಶೋಧನಾ ವಿದ್ಯಾರ್ಥಿಗಳು ಪಿ.ಎಚ್.ಡಿ. ಪದವಿ ಪಡೆದಿದ್ದಾರೆ. ಇವರು ಅಧ್ಯಯನ-ಅಧ್ಯಾಪನದ ಜತೆಗೆ ಸಂಘ ಸಂಸ್ಥೆಗಳ ಒಡನಾಟವೂ ಹೊಂದಿದ ಇವರು, ಸೌಮ್ಯ ಸ್ವಭಾವ, ಎತ್ತರದ ನಿಲುವನ್ನೂ ಹೊಂದಿದ ಇವರು ಸದಾಕ್ರಿಯಾಶೀಲರಾಗಿ ಯುವ ಪೀಳಿಗೆಗೆ ಪ್ರೇರಕ ಶಕ್ತಿಯಾಗಿ ಅನುಪಮ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಅನೇಕ ಮೌಲಿಕ ಕೃತಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿಗಳೂ ಸಹ ಲಭಿಸಿವೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News