ಕಲಬುರಗಿ | ಡಾ.ಪುನೀತ್ ರಾಜ್‍ಕುಮಾರ್ ಪ್ರತಿಭಾವಂತ ನಟರಾಗಿದ್ದರು : ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ : ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಅವರು ಕನ್ನಡ ನಾಡು-ನುಡಿ, ಕಲೆ, ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದ ಪ್ರತಿಭಾವಂತ ನಟರಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಹೇಳಿದರು.
ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾ ಕಸಾಪ ದಿಂದ ಏರ್ಪಡಿಸಿದ ಡಾ.ಪುನೀತ್ ರಾಜ್‍ಕುಮಾರ್ ಅವರ 50ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಪುನೀತ್ ರಾಜ್‍ಕುಮಾರ್ ಅವರು ಸದ್ದಿಲ್ಲದೇ ಸಾಕಷ್ಟು ಸಮಾಜ ಸೇವೆ ಮಾಡಿ ಕನ್ನಡಿಗರ ಹೃದಯದಲ್ಲಿ ನೆಲೆಸಿದ್ದಾರೆ. ಸಮಾಜ ಸೇವೆಗೆ ನಿಜವಾದ ಅರ್ಥ ತುಂಬಿದ ಮಹಾನುಭಾವರಾಗಿದ್ದಾರೆ ಎಂದು ಹೇಳಿದರು.
ಸಹಕಾರಿ ಧುರೀಣ ಚನ್ನಮಲ್ಲಯ್ಯ ಹಿರೇಮಠ, ಕಲ್ಯಾಣಕುಮಾರ ಸಂಗಾವಿ, ಜಿಲ್ಲಾ ಕಸಾಪದ ಶಿವರಾಜ ಅಂಡಗಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ಸಂತೋಷ ಕುಡಳ್ಳಿ, ಧರ್ಮರಾಜ ಜವಳಿ, ಶಿವಾನಂದ ಸುರವಾಸೆ, ರವಿಕುಮಾರ ಶಹಾಪುರಕರ್, ಪ್ರಭವ ಪಟ್ಟಣಕರ್, ರಮೇಶ ಡಿ.ಬಡಿಗೇರ, ಶಿವಶರಣ ಹಡಪದ, ಎಂ.ಎನ್.ಸುಗಂಧಿ, ಚಂದ್ರಕಾಂತ ಸೂರನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.