ಕಲಬುರಗಿ | ಪ್ರತಿಯೊಬ್ಬರು ಕಾನೂನಿನ ನಿಯಮಗಳನ್ನು ತಿಳಿದುಕೊಳ್ಳಬೇಕು : ನ್ಯಾ.ಎಸ್.ನಾಗಶ್ರೀ

Update: 2024-11-09 11:27 GMT

ಕಲಬುರಗಿ : ಪ್ರತಿಯೊಬ್ಬ ವ್ಯಕ್ತಿಗೆ ಕಾನೂನಿನ ಮಾಹಿತಿ ಬೇಕಾಗುತ್ತದೆ, ದೈನಂದಿನ ಜೀವನದಲ್ಲಿ ಸಮಸ್ಯೆಗಳು ಬರುತ್ತವೆ. ಅದನ್ನು ಕಾನೂನಿನ ರೀತಿಯಲ್ಲಿ ಬಗೆಹರಿಸಿಕೊಳ್ಳಲು ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರ ಅಧ್ಯಕ್ಷೆ ಎಸ್. ನಾಗಶ್ರೀ ಅವರು ಹೇಳಿದ್ದಾರೆ.

ಶನಿವಾರದಂದು ಜಿಲ್ಲಾ ನ್ಯಾಯಾಲಯದ ಅವರಣದಲ್ಲಿರುವ ಎ.ಡಿ.ಆರ್.ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ʼಕಾನೂನು ಅರಿವು ನೆರವುʼ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಲಬುರಗಿ ಎಸ್. ನಾಗಶ್ರೀ ಅವರು ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರೀಯ ಕಾನೂನಿನ ಸೇವೆಗಳ ದಿನಾಚರಣೆ ಮುಖ್ಯ ಉದ್ದೇಶ ಬಡವರಿಗೆ, ಮಹಿಳೆಯರಿಗೆ ಹಾಗೂ ಹಿಂದುಳಿದವರಿಗೆ ಉಚಿತವಾಗಿ ಕಾನೂನಿನ ನೆರವು ನೀಡಲು ಪ್ರತಿ ಮೂರು ತಿಂಗಳಿಗೆ ಲೋಕ ಅದಾಲತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ, ಈಗಾಗಲೇ ಅನೇಕ ಜನರಿಗೆ ಅವರ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಲಬುರಗಿ ಶ್ರೀನಿವಾಸ ನವಲೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್, ಜಿಲ್ಲಾ ನ್ಯಾಯಧೀಶರು ಹಾಗೂ ಅಧ್ಯಕ್ಷರು ಖಾಯಂ ಜನತಾ ನ್ಯಾಯಲಯ ಎಸ್.ಎಲ್.ಚವ್ಹಾಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜುಕುಮಾರ ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಭಿವೃದ್ಧಿ ಯೋಜನಾಧಿಕಾರಿ ಭೀಮರಾಯ ಕಣ್ಣೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರೇಮಾ, ಸಂಪನ್ಮೂಲ ವ್ಯಕ್ತಿಗಳಾದ ಬಿ.ಎಂ.ರಾವೂರ, ಅಂಗನವಾಡಿ ಮೇಲ್ವಿಚಾರಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News