ಕಲಬುರಗಿ: ಕಾಫಿಜಾ ಕೆಫೆಯಲ್ಲಿ ಅಗ್ನಿ ಅವಘಡ

Update: 2024-12-14 07:02 GMT

ಕಲಬುರಗಿ: ನಗರದ ಖರ್ಗೆ ಸರ್ಕಲ್‌ನಲ್ಲಿರುವ ಕಟ್ಟಡವೊಂದರ ಮೂರನೇ ಮಹಡಿಯಲ್ಲಿರುವ ಕಾಫಿಜಾ ಕೆಫೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

 ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆ ಇಡೀ ಕಾಫಿಜಾ ಕೆಫೆ ಸೆಂಟರ್‌ಗೆ ವ್ಯಾಪಿಸಿದ್ದನ್ನು ಕಂಡ ಸಾರ್ವಜನಿಕರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

ಎಂ.ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News