ಕಲಬುರಗಿ: ಬಿಇಒ ಕಚೇರಿಯಲ್ಲಿ ಅಗ್ನಿ ಅವಘಡ; ದಾಖಲೆಗಳು ಸುಟ್ಟು ಭಸ್ಮ

Update: 2025-01-14 07:09 GMT

ಕಲಬುರಗಿ: ಅಫಜಲಪುರ ಪಟ್ಟಣದಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿ, ಹಲವು ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ಮಂಗಳವಾರ ನಡೆದಿದೆ.

 ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಕಚೇರಿಯಲ್ಲಿನ ಬಹುತೇಕ ದಾಖಲೆಗಳು, ಪೀಠೋಪಕರಣಗಳು ಹಾಗೂ ಕಂಪ್ಯೂಟರ್ ಸೇರಿದಂತೆ ಎಲೆಕ್ಟ್ರಿಕಲ್ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಪೊಲೀಸರು ಮತ್ತು ಅಗ್ನಿ ಶಾಮಕದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News