ಕಲಬುರಗಿ | ಪಾಲಿಕೆಯ ಆಯುಕ್ತರ ನಕಲಿ ಸಹಿ ಮಾಡಿ ವಂಚನೆ: ಐವರ ಬಂಧನ

Update: 2025-01-15 09:03 GMT

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರ ನಕಲಿ ಸಹಿ ಮಾಡಿ ಲಕ್ಷಾಂತರ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ ಹೇಳಿದ್ದಾರೆ.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಆಯುಕ್ತರ ಆಪ್ತ ಸಹಾಯಕ ಮಿಲ್ಲತ್ ನಗರದ ಮಹಮ್ಮದ್ ನಯಿಮುದ್ದೀನ್ ಸರಗಿ, ಬಿಲಾಲಾಬಾದ್ ಕಾಲೋನಿಯ ವಾಜೀದ್ ಜಬ್ಬಾರ್, ಅಹ್ಮದ್ ಕಾಲೋನಿಯ ಮಿರ್ಜಾ ಆರಿಫ್ ಬೇಗ್, ಪಾಲಿಕೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಇಸ್ಲಾಮಾಬಾದ್ ಕಾಲೋನಿಯ ನಸೀರ್ ಅಹ್ಮದ್, ಪಾಲಿಕೆಯಲ್ಲಿ ಸೀನಿಯರ್ ಪ್ರೋಗ್ರಾಮರ್ ಆಗಿದ್ದ ಎಸ್ ಕೆ ಮಿಲ್ ನಗರದ ಮೊಹಮ್ಮದ್ ಅಬ್ದುಲ್ ರೆಹಮಾನ್ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ 30 ಲಕ್ಷದ 75 ಸಾವಿರ ನಗದು ಹಣ ಜಪ್ತಿ ಮಾಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖಾ ತಂಡ ರಚಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕಮಿಷನರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News