ಕಲಬುರಗಿ | ಬಸವೇಶ್ವರ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2025-04-03 21:21 IST
Photo of Program
  • whatsapp icon

ಕಲಬುರಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯು ಎಸ್‌ಕೆಡಿಆರ್‌ಡಿಪಿ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂಎಲ್ಸಿ ಶಶೀಲ್ ಜಿ.ನಮೋಶಿಯವರ ನೇತೃತ್ವದಲ್ಲಿ ಎಲ್ಲಾ ಆಡಳಿತ ಮಂಡಳಿಯವರ ಸಹಕಾರದಿಂದ ಸಾರ್ವಜನಿಕರಿಗೆ, ಅನೇಕ ಸಂಘ ಸಂಸ್ಥೆಗಳ ನೌಕರರಿಗೆ ಯಶಸ್ವಿಯಾಗಿ ಉಚಿತ ಆರೋಗ್ಯ ಶಿಬಿರಗಳು, ನೇತ್ರ ತಪಾಸಣಾ ಶಿಬಿರಗಳನ್ನು ಏರ್ಪಡಿಸುತ್ತಿರುವುದು ಶ್ಲಾಘನೀಯ ಎಂದು ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ.ಕಿರಣ್ ದೇಶಮುಖ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಶಿಬಿರಗಳನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಆನಂದ ಗಾರಂಪಳ್ಳಿ, ಆಸ್ಪತ್ರೆಯ ಡೀನ್ ಡಾ.ವಿಜಯಕುಮಾರ್ ಕಪ್ಪಿಕೇರಿ, ತೆರಿಗೆ ವಿಭಾಗದ ಮುಖ್ಯಸ್ಥರಾದ ಡಾ.ಹರಸೂರ್, ಡಾ.ನಂದ್ಯಾಳ, ಆಡಳಿತ ಮಂಡಳಿ ಸದಸ್ಯರಾದ ಡಾ.ಗುರುಲಿಂಪ್ಪ ಪಾಟೀಲ್, ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ.ವಿಜಯಶ್ರೀ, ಗಣಪತಿ ಮಲಂಜಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News