ಕಲಬುರಗಿ | ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2024-12-03 11:26 GMT

ಕಲಬುರಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಾಮಾನ್ಯ ರೋಗ ವಿಭಾಗದ ವತಿಯಿಂದ ಕಾಮಾಲೆ ಮತ್ತು ಯುಕೃತ ಸಮಸ್ಯೆಯಿಂದ ಬಳಲುತ್ತಿರುವ ಒಳ ರೋಗಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಾಮಾನ್ಯ ರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುರೇಶ್ ಹರಸೂರ್ ಅವರ ನೇತೃತ್ವದಲ್ಲಿ ತಜ್ಞರಾದ ಡಾ.ಬಸವರಾಜ ಬೆಳ್ಳಿ, ಡಾ.ಶರಣ ನಂದ್ಯಾಳ, ಡಾ.ಸ್ವರಾಜ್ ವಡ್ಡಣಕೇರಿ, ಡಾ.ವಿಶ್ವನಾಥ್ ಸಜ್ಜನ ಶೆಟ್ಟಿ, ಡಾ.ಕರಣ ಬಿಜಾಪೂರೆ, ಡಾ.ಶ್ವೇತಾ ಅವರು ರೋಗಿಗಳನ್ನು ಪರೀಕ್ಷೆ ಮಾಡಿ ಉಚಿತ ಸಲಹೆ ಮತ್ತು ಸಂಬಂಧಿಸಿದ ಚಿಕಿತ್ಸೆ ನೀಡಿದರು. ಶಿಬಿರದಲ್ಲಿ CBC, RBS, LFT, USG, Abdomen ಪರೀಕ್ಷೆಗಳನ್ನು ಸಂಪೂರ್ಣವಾಗಿ ಉಚಿತವಾಗಿ ಮಾಡಲಾಯಿತು. ರೋಗಿಗಳಿಗೆ ಅವಶ್ಯವಾಗಿರುವ ಔಷಧಿ ಮತ್ತು ಮಾತ್ರೆಗಳನ್ನು ಸಂಸ್ಥೆಯ ವತಿಯಿಂದ ಉಚಿತವಾಗಿ ವಿತರಿಸಲಾಯಿತು.

ಕಲಬುರಗಿ ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಸುಮಾರು 236ಕ್ಕೂ ಹೆಚ್ಚಿನ ಸಂಖ್ಯೆಯ ರೋಗಿಗಳು ಇದರ ಸದುಪಯೋಗ ಪಡೆದುಕೊಂಡರು. ಈ ಶಿಬಿರವನ್ನು ಸಂಸ್ಥೆಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ ಹಾಗೂ ಉಪಾಧ್ಯಕ್ಷರಾದ ರಾಜಾ ಭಿ.ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ.ಕೈಲಾಸ ಪಾಟೀಲ್ ಬಸವೇಶ್ವರ ಆಸ್ಪತ್ರೆಯ ಸಂಚಾಲಕರಾದ ಡಾ.ಕಿರಣ್ ದೇಶಮುಖ್ ಹಾಗೂ ಆಡಳಿತ ಮಂಡಳಿ ಸದಸ್ಯರು ಈ ಶಿಬಿರದಲ್ಲಿದ್ದರು.

ಶಿಬಿರದಲ್ಲಿ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಉಪ ಡೀನ್ ಡಾ.ವಿಜಯಕುಮಾರ್ ಕಪ್ಪಿಕೇರಿ, ವೈದ್ಯಕೀಯ ಅಧೀಕ್ಷಕರಾದ ಡಾ.ಆನಂದ ಗಾರಂಪಳ್ಳಿ, ಆರೋಗ್ಯ ತಪಾಸಣಾ ಶಿಬಿರದ ಸಂಯೋಜಕಿ ಪ್ರಿಯದರ್ಶಿನಿ ಟೆಂಗಳಿ, ಐ.ಕೆ.ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News