ಕಲಬುರಗಿ | ಬಸವೇಶ್ವರ ಆಸ್ಪತ್ರೆಯಲ್ಲಿ ಮಧುಮೇಹ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2024-11-15 16:48 GMT

ಕಲಬುರಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದಿಂದ ಮಕ್ಕಳ ದಿನಾಚರಣೆ ಹಾಗೂ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಕಲಬುರಗಿ ಜಿಲ್ಲೆಯಲ್ಲಿ ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಆರೋಗ್ಯ ತಪಾಸಣಾ ಶಿಬಿರದ ನೇತೃತ್ವವನ್ನು ಬಸವೇಶ್ವರ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ರೂಪಾ ಮಂಗಶೆಟ್ಟಿ ವಹಿಸಿದ್ದರು. ಶಿಬಿರದಲ್ಲಿ ಮಕ್ಕಳ ತಜ್ಞರಾದ ಡಾ.ಬಸವರಾಜ ಪಾಟೀಲ, ಡಾ.ಕಿರಣ್ ಹೊಸಗೌಡ, ಡಾ.ಅಪೂರ್ವ ಎ.ಬಿ., ಡಾ.ಮೀನಾಕ್ಷಿ ವಡ್ಡಣಕೇರಿ, ಡಾ.ರೋಹಿಣಿ, ಡಾ.ರುದ್ರಾಕ್ಷಿ ಇಟಗಿ, ಡಾ.ಶರಣಕುಮಾರ ಕೆ., ಡಾ.ಶಿವಕುಮಾರ್ ಸಂಗೋಳಗಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಸಲಹೆ ಹಾಗೂ ಉಚಿತ ಚಿಕಿತ್ಸೆ ನೀಡಿದರು.

ಶಿಬಿರದಲ್ಲಿ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳು ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ, ಮಧುಮೇಹ ಕಾಯಿಲೆಯಿಂದ ಆಗುವ ಪರಿಣಾಮಗಳು, ಅವರಿಗೆ ನೀಡಬೇಕಾದ ಆಹಾರ ಕ್ರಮಗಳು ಬಗ್ಗೆ ಮಕ್ಕಳ ಪಾಲಕರ ಜೊತೆ ಆಪ್ತ ಸಮಾಲೋಚನೆ ನಡೆಸಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಬಸವೇಶ್ವರ ಆಸ್ಪತ್ರೆಯ ಸಂಚಾಲಕರಾದ ಡಾ.ಕಿರಣ್ ದೇಶಮುಖ್, ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಶರಣಗೌಡ ಪಾಟೀಲ್, ಉಪ ಡೀನ್ ರಾದ ಡಾ.ವಿಜಯಕುಮಾರ್ ಕಪ್ಪಿಕೇರಿ, ವೈದ್ಯಕೀಯ ಅಧೀಕ್ಷಕರಾದ ಡಾ.ಆನಂದ ಪಾರಂಪಳ್ಳಿ ಆರೋಗ್ಯ ತಪಾಸಣಾ ಶಿಬಿರದ ಸಂಯೋಜಕಿ ಪ್ರೀಯ ದರ್ಶನಿ ಟೆಂಗಳಿ ಉಪಸ್ಥಿತರಿದ್ದರು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News