ಕಲಬುರಗಿ | ಮೂಢನಂಬಿಕೆಗಳನ್ನು ತ್ಯಜಿಸಿ ಹೊಸ ಬದುಕು ರೂಪಿಸಿಕೊಳ್ಳಿ : ಡಾ.ಜಯದೇವಿ ಗಾಯಕವಾಡ

Update: 2025-04-11 18:38 IST
Photo of Program
  • whatsapp icon

ಕಲಬುರಗಿ: ಯಾವುದೇ ಸಮಾಜ ಪ್ರಗತಿ ಸಾಧಿಸಬೇಕಾದರೆ ಮಹಿಳೆಯರ ಪಾಲ್ಗೊಳ್ಳುವಿಕೆ ಮುಖ್ಯ. ಅದಕ್ಕಾಗಿ ಅಂಧಶ್ರದ್ಧೆ ಮತ್ತು ಮೂಢನಂಬಿಕೆಗಳನ್ನು ತ್ಯಜಿಸಿ ಹೊಸ ಬದುಕು ರೂಪಿಸಿಕೊಳ್ಳಬೇಕು ಎಂದು ಕೇಂದ್ರ ಕನ್ನಡ ಸಾಹಿತ್ಯ ಅಕಾಡೆಮಿಯ ಸಲಹಾ ಸಮಿತಿ ಸದಸ್ಯೆ-ಸಾಹಿತಿ ಡಾ.ಜಯದೇವಿ ಗಾಯಕವಾಡ ಕರೆ ನೀಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ನಾಗಾಂಬಿಕಾ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ 'ಭೀಮ ಜ್ಞಾನಯಾನ' ಕುರಿತು ವಿಚಾರ ಸಂಕಿರಣದಲ್ಲಿ 'ಮಹಿಳಾ ಏಳ್ಗೆ – ಅಂಬೇಡ್ಕರ್ ಚಿಂತನೆ' ಕುರಿತು ಮಾತನಾಡಿದ ಅವರು, ಸಮ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಾಕ್ಷರತೆ ಅವಶ್ಯ. ಶಿಕ್ಷಣ ಕೊಡಿಸುವ ಮೂಲಕ ಮಹಿಳಾ ಸಬಲೀಕರಣ ಮಾಡಬೇಕಾಗಿದೆ. ಶೋಷಣೆ ಮತ್ತು ಅತ್ಯಾಚಾರ ಮುಕ್ತ ಸಮಾಜ ನಿರ್ಮಿಸಲು ಮೂಢನಂಬಿಕೆಗಳನ್ನು ಮೆಟ್ಟಿ ನಿಲ್ಲಬೇಕಾಗಿದೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಸದುಪಯೋಗ ಪಡಿಸಿಕೊಂಡು ಬುದ್ಧ, ಬಸವ ಮತ್ತು ಡಾ.ಅಂಬೇಡ್ಕರ್ ರ ತತ್ವಾದರ್ಶಗಳಲ್ಲಿ ನಡೆಯಬೇಕಾಗಿದೆ. ಆಗಲೇ ಬಾಬಾ ಸಾಹೇಬರ ಪ್ರಬುದ್ಧ ಭಾರತದ ಕನಸು ನನಸಾಗಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಸಾಮಾಜಿಕ ಸಮಾನತೆ - ಅಂಬೇಡ್ಕರ್ ಚಿಂತನೆ ಕುರಿತು ಲೇಖಕ ಡಾ.ಜಗನ್ನಾಥ ಎಲ್ ತರನಳ್ಳ ಮಾತನಾಡಿ, ನಾವು ಕೇವಲ ರಾಜಕೀಯ ಸ್ವಾತಂತ್ರ್ಯ ಪಡೆದರೆ ಸಾಲದು. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಪ್ರತಿಪಾದಿಸಿದ ಅಂಬೇಡ್ಕರ್ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸಂವಿಧಾನದಲ್ಲಿ ಕಲ್ಪಿಸಿದ ಹಕ್ಕುಗಳು ಸದುಪಯೋಗವಾಗಬೇಕು. ಮಹಿಳೆಯರಿಗೆ ಶಿಕ್ಷಣ ಕೊಡಿಸಬೇಕು ಎಂದರು.

ಸಂವಿಧಾನ ತತ್ವ - ಶರಣ ತತ್ವ ಕುರಿತು ಮಾತನಾಡಿದ ಶರಣ ಚಿಂತಕ ಪ್ರೊ.ಸಂಜಯ ಮಾಕಲ್, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು.

ಪತ್ರಕರ್ತ ಮಹೇಶ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಅರವಿಂದಕುಮಾರ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಶಕುಂತಲಾ ಪಾಟೀಲ, ಸಿದ್ಧಲಿಂಗ ಬಾಳಿ, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ಎಂ.ಎನ್. ಸುಗಂಧಿ, ದಿನೇಶ ಮದಕರಿ, ರೇವಣಸಿದ್ದಪ್ಪ ಜೀವಣಗಿ, ಚಂದ್ರಕಾoತ ಸೂರನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News