ಕಲಬುರಗಿ | ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ; ಲಾರಿ ಚಾಲಕ ಬಂಧನ

Update: 2025-03-26 15:27 IST
ಕಲಬುರಗಿ | ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ; ಲಾರಿ ಚಾಲಕ ಬಂಧನ
  • whatsapp icon

ಕಲಬುರಗಿ : ರಾತ್ರೋ ರಾತ್ರಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯೊಂದು ಜಪ್ತಿ ಮಾಡಿ, ಚಾಲಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಗರದ ರಿಂಗ್ ರೋಡ್ ಬಳಿಯ ತಾಜ್ ನಗರದಲ್ಲಿ ನಡೆದಿದೆ.

ತನಿಖೆ ವೇಳೆ 104 ಕ್ವಿಂಟಾಲ್ ಅಕ್ರಮ ಅಕ್ಕಿ ಪತ್ತೆಯಾಗಿದ್ದು, ಲಾರಿ ಚಾಲಕ ವಿರೇಶ್ ಎಂಬಾತರನ್ನು ಬಂಧಿಸಲಾಗಿದೆ. ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಅಕ್ಕಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಈ ಜಪ್ತಿಯನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News