ಕಲಬುರಗಿ | ಡಿ.22ರಂದು ಜಯದೇವ ಆಸ್ಪತ್ರೆ ಲೋಕಾರ್ಪಣೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

Update: 2024-12-19 11:56 GMT

ಕಲಬುರಗಿ : ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಕಲಬುರಗಿ ನಗರದಲ್ಲಿ ಕೆ.ಕೆ.ಅರ್.ಡಿ.ಬಿ. ಮಂಡಳಿ ಅನುದಾನದಲ್ಲಿ ನಿರ್ಮಾಣವಾಗಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಯನ್ನು ಇದೇ ಡಿ.22 ರಂದು ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಗುರುವಾರ ಇಲ್ಲಿನ ಆಸ್ಪತ್ರೆಗೆ ಭೇಟಿ ನೀಡಿ ಪೂರ್ವಸಿದ್ಧತಾ ಕಾರ್ಯ ಪರಿಶೀಲಿಸಿದರು.

ಜಯದೇವ ಆಸ್ಪತ್ರೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಇನ್ನಿತರ ಜನಪ್ರತಿನಿಧಿಗಳು ಭಾಗವಹಿಸುವುದರಿಂದ ಟೆಂಟ್, ಆಸನ ವ್ಯವಸ್ಥೆ, ಪಾರ್ಕಿಂಗ್ ಸ್ಥಳ ಇತ್ಯಾದಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಡಿ.ಎಚ್.ಓ ಡಾ.ಶರಣಬಸಪ್ಪ ಖ್ಯಾತನಾಳ, ಕಲಬುರಗಿಯ ಜಯದೇವ ಶಾಖಾ ಆಸ್ಪತ್ರೆಯ ಪ್ರಭಾರಿ ಅಧೀಕ್ಷಕ ಡಾ.ವಿರೇಶ ಪಾಟೀಲ, ಸಮನ್ವಯಾಧಿಕಾರಿ ಸಂತೋಷ್, ಪ್ರೊಜೆಕ್ಟ್ ಇಂಜಿನೀಯರ್ ಪ್ರಸಾದ ಉಪಸ್ಥಿತರಿದ್ದರು.

 

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News