ಕಲಬುರಗಿ | ಅಂತರ್‌ರಾಷ್ಟ್ರೀಯ ಮಹಿಳಾ ದಿನ ಆಚರಣೆ

Update: 2025-03-18 19:31 IST
Photo of Program
  • whatsapp icon

ಕಲಬುರಗಿ : ಕಲಬುರಗಿ ತಾಲೂಕಿನ ಭೂಪಾಲ್ ತಗನೂರು ಗ್ರಾಮ ಪಂಚಾಯತಿಯಲ್ಲಿ ಬರುವ ವೆಂಕಟ್ ಬೇನೂರ್ ಗ್ರಾಮದಲ್ಲಿ ಅಮೃತ ಸರೋವರ ಕೆರೆಯಲ್ಲಿ ನರೇಗಾ ಯೋಜನೆಯಡಿ ಕೆರೆ ಹೊಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಹಿಳಾ ಕೂಲಿ ಕಾರ್ಮಿಕರೊಂದಿಗೆ ಮಂಗಳವಾರ ಕೇಕ್ ಕತ್ತರಿಸುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್ ಅವರು ಮಾತನಾಡಿ, ನರೇಗಾ ಕಾಮಗಾರಿ ನಡೆಯುವ ಸ್ಥಳದಲ್ಲಿ 213 ಜನ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಅವರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ಹಾಗೂ ಆರೋಗ್ಯ ಕಿಟ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜನವಾದಿ ಮಹಿಳಾ ಸಂಘದ ಮುಖ್ಯಸ್ಥರಾದ ಕೆ.ನೀಲಾ ಮಾತನಾಡಿದರು.

ಗ್ರಾಮ ಪಂಚಾಯತ್‌ ಅಧ್ಯಕ್ಷ ಮುತ್ತುರಾಜ್ ಸೇಳ್ಗಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸೂರ್ಯಕಾಂತ್, ಕಲಬುರಗಿ ಗ್ರಾಮ ಪಂಚಾಯತ್‌ ಐಇಸಿ ಸಂಯೋಜಕ ಮೋಸಿನ್ ಖಾನ್, ಗ್ರಾಮ ಪಂಚಾಯತ್‌ ಕಾರ್ಯದರ್ಶಿಗಳು ಸಿಬ್ಬಂದಿಗಳು ಸೇರಿದಂತೆ ಶರಣು ಕುಮಾರ್, ದಶರತ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News