ಕಲಬುರಗಿ | ಅಂತರ್‌ರಾಷ್ಟ್ರೀಯ ಮಹಿಳಾ ದಿನ ಆಚರಣೆ

Update: 2025-03-18 23:47 IST
Photo of Program
  • whatsapp icon

ಕಲಬುರಗಿ : ಎಲ್ಲ ವಲಯಗಳಲ್ಲಿ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ದುಡಿಯುವ ಮಹಿಳೆಯರ ಸಮನ್ವಯ ಸಮಿತಿ, ಸಿಐಟಿಯು ಸಂಚಾಲಕಿ ಶಾಂತಾ ಘಂಟಿ ಒತ್ತಾಯಿಸಿದರು.

ಮುಟ್ಟಿನ ರಜೆ ಜಾರಿ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ, ಸಿಐಟಿಯು ವತಿಯಿಂದ ಆಯೋಜಿಸಿದ್ದ 'ಅಂತರರಾಷ್ಟ್ರೀಯ ಮಹಿಳೆ ದಿನಾಚರಣೆ' ಮತ್ತು ಮಹಿಳೆಯರ ಕುರಿತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರಿಗೆ ಉದ್ಯೋಗಗಳನ್ನು ಖಚಿತಪಡಿಸಬೇಕು, ಮಹಿಳೆಯರನ್ನು ಕಾರ್ಮಿಕರು ಅಥವಾ ರೈತರು ಎಂದು ಪರಿಗಣಿಸಬೇಕು. ಸರ್ಕಾರದ ವಿವಿಧ ಸ್ಕೀಮ್ ಗಳಡಿ ಗೌರವಧನಕ್ಕೆ ಕೆಲಸ ಮಾಡುವ ಕಾರ್ಮಿಕರೆಂದು ಗುರುತಿಸಿ ಕನಿಷ್ಠ ವೇತನ, ಸೇವಾ ಭದ್ರತೆ, ಗ್ರಾಚ್ಯುಟಿ ಸೌಲಭ್ಯಗಳನ್ನು ನೀಡಬೇಕು, ಎಲ್ಲಾ ಮಹಿಳೆಯರಿಗೂ ಮುಟ್ಟಿನ ರಜೆ, ಹೆರಿಗೆ ರಜೆ, ಹೆರಿಗೆ ಸೌಲಭ್ಯ ಹಾಗೂ ನರೇಗಾ ಕೆಲಸವನ್ನು ನಗರಗಳಿಗೆ ವಿಸ್ತರಿಸಿ ದಿನ ಕೂಲಿ 600 ರೂ. ಹೆಚ್ಚಿಸಬೇಕು, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತಾ ಕ್ರಮಗಳನ್ನು ಖಚಿತ ಪಡಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಈ ಎಲ್ಲ 15 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.

ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ಮಹಿಳೆಯರ ಕುರಿತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪ್ರಸ್ತುತ ಪಡಿಸಿದರು.

ಈ ಸಂದರ್ಭದಲ್ಲಿ ಗೌರಮ್ಮ ಪಾಟೀಲ್, ವಿಜಯಲಕ್ಷ್ಮೀ ಹಿರೇಮಠ, ಸಂಗೀತಾ ಗುತ್ತೇದಾರ್ ಸೇರಿದಂತೆ ಅನೇಕರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News