ಕಲಬುರಗಿ | ನ.30ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ : ಸಚಿನ್ ಫರತಹಾಬಾದ್
ಕಲಬುರಗಿ : ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕ, ಗದ್ದಗಿ ಶಿಕ್ಷಣ ನರಸಿಂಗ್ ಸಂಸ್ಥೆ ವತಿಯಿoದ ನ.30ರಂದು ಸಂಜೆ 5ಕ್ಕೆ ನಗರದ ಕನ್ನಡ ಭವನದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಸಚಿನ್ ಫರತಹಾಬಾದ್ ಹೇಳಿದ್ಧಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಜ್ಯೂನಿಯರ್ ರವಿಚಂದ್ರನ್, ಕಾಮಿಡಿ ಕಿಲಾಡಿ ಗುಂಡಣ್ಣ ಡಿಗ್ಗಿ, ನೃತ್ಯ ಕಲಾವಿದೆ ಅನನ್ಯ ಗೋಲ್ಡ್ಸ್ಮಿತ್ ಅವರು ಆಗಮಿಸುವರು. ನಂತರ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಸೋಮಶೇಖರ ಶಿವಾಚಾರ್ಯರು, ಗುರುರಾಜೇಂದ್ರ ಶಿವಯೋಗಿಗಳು ಸಾನ್ನಿಧ್ಯ ವಹಿಸಲಿದ್ದು, ಶಾಸಕ ಅಲ್ಲಮಪ್ರಭು ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು, ಮಾಜಿ ಶಾಸಕ ದತ್ತಾತ್ರೇಯ ಸಿ.ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಯರ್ ಯಲ್ಲಪ್ಪ ನಾಯ್ಕೋಡಿ, ಎಂಎಲ್ಸಿಗಳಾದ ಬಿ.ಜಿ.ಪಾಟೀಲ್, ತಿಪ್ಪಣಪ್ಪ ಕಮಕನೂರ, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಸುರೇಶ ಶರ್ಮಾ, ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಡಾ.ವಿಕ್ರಮ್ ಸಿದ್ದಾರೆಡ್ಡಿ, ಧೂಳಪ್ಪ ದೊಡ್ಡಮನಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದರು.
ವಿವಿಧ ಕ್ಷೇತ್ರದ 12 ಜನ ಸಾಧಕರಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸುರೇಶ ಹನಗುಡಿ, ಅಕ್ಷಯ, ಗುಡ್ಡು ಸಿಂಗ್, ಅಣವೀರ ಪಾಟೀಲ್, ರವಿ ಸಜ್ಜನ್, ಪ್ರಕಾಶ ಇತರರಿದ್ದರು.