ಕಲಬುರಗಿ | ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ

ಕಲಬುರಗಿ : ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಪುನಿತರಾಜ ಸಿ. ಕವಡೆ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಸಭೆ ನಡೆಸಿ, ಸಭೆಯಲ್ಲಿ ರಾಜ್ಯಾಧ್ಯಕ್ಷ ನಿಂಗರಾಜಗೌಡ್ರು ಅವರ ಆದೇಶದ ಮೇರೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಮಹಿಳಾ ಘಟಕದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಸುಧಾರಾಣಿ ಪೂಜಾರಿ, ಸೇಡಂ ತಾಲೂಕಿನ ಮಹಿಳಾ ಘಟಕದ ಅಧ್ಯಕ್ಷರಾಗಿ ಭಾರತಮ್ಮಾ ಎಂ., ಸೇಡಂ ತಾಲೂಕಿನ ಮಹಿಳಾ ಘಟಕದ ಉಪಾಧ್ಯಕ್ಷರಾಗಿ ಆನಂದಮ್ಮ ರೆಸ್ಟಾಪೂರ, ಸೇಡಂ ತಾಲೂಕಿನ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ ಸಕಲ್ಸಪಲ್ಲಿ ಅವರನ್ನು ಆಯ್ಕೆ ಮಾಡಲಾಯಿತು.
ಇವರ ನಾಯಕತ್ವದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಸಂಘಟನೆಯಲ್ಲಿ ಸಕ್ರೀಯವಾಗಿ ದುಡಿಯುತ್ತಿದ್ದಿರೆಂದು ನಿಮ್ಮ ಸೇವೆಯನ್ನು ಪರಿಗಣಿಸಿ ನೇಮಕ ಮಾಡಿ ಈ ನೇಮಕಾತಿ ಪತ್ರ ನೀಡಲಾಯಿತು. ನೀಡಿರುವ ಗುರುತರ ಜವಾಬ್ದಾರಿಯನ್ನು ನಾಡು, ನುಡಿಯ ಬಗ್ಗೆ ಕಾಳಜಿಯೊಂದಿಗೆ ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ಸ್ವಾಭಿಮಾನಿ ಸೇನೆಯ ಘೋಷ ವಾಕ್ಯವಾದ ಸಮಗ್ರ ಕರ್ನಾಟಕ ಅಭಿವೃದ್ಧಿಯೇ ನಮ್ಮ ಗುರಿ ಎನ್ನುವ ಉದ್ದೇಶ ಈಡೇರಿಕೆಗೆ ಶ್ರಮಿಸಲೆಂದು ಆಶಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗಿಯ ಅಧ್ಯಕ್ಷ ನಿಲಕಂಠಪ್ಪಗೌಡ ಎಸ್.ಪೊಲೀಸ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಕಲ್ಯಾಣಿ ಎಸ್.ತಳವಾರ ಸೇರಿದಂತೆ ಕಾರ್ಯಕರ್ತರು ಇದ್ದರು.