ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

Update: 2024-02-07 08:22 GMT

ರೋಹನ್‌ ವಾಕಡೆ

ಕಲಬುರಗಿ: ಹಳೆ ವೈಷಮ್ಯ ಹಿನ್ನಲೆಯಲ್ಲಿ ಯುವಕನೊಬ್ಬನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಸೈಯದ್‌ ಚಿಂಚೋಳಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.

ರೋಹನ್‌ ವಾಕಡೆ (22) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಳೆ ವೈಷಮ್ಯ ಹಿನ್ನಲೆಯಲ್ಲಿ ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಯುವಕನ ಮೃತದೇಹವನ್ನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಚೌಕ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

ಘಟನೆ ಸಂಬಂಧ ಚೌಕ್‌ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News