ಕಲಬುರಗಿ | ಆಯ್ಕೆಯಾದ ಪುಸ್ತಕಗಳ ಪಟ್ಟಿ ವೆಬ್‍ಸೈಟ್‍ನಲ್ಲಿ ಪ್ರಕಟ

Update: 2025-03-17 20:30 IST
ಕಲಬುರಗಿ | ಆಯ್ಕೆಯಾದ ಪುಸ್ತಕಗಳ ಪಟ್ಟಿ ವೆಬ್‍ಸೈಟ್‍ನಲ್ಲಿ ಪ್ರಕಟ
  • whatsapp icon

ಕಲಬುರಗಿ : 2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಇಲಾಖೆಯ dpl.karnataka.gov.in ವೆಬ್‍ಸೈಟ್‍ದಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.

ಲೇಖಕರು, ಲೇಖಕ/ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಸರಬರಾಜುದಾರರು ಸಲ್ಲಿಸಿದ ಪುಸ್ತಕಗಳ ಹೆಸರು, ಪ್ರಕಾಶಕರ ಹೆಸರು, ಸರಬರಾಜುದಾರರ ಹೆಸರು, ಲೇಖಕರ ಹೆಸರು, ಪುಟ ಸಂಖ್ಯೆ, ಮುಖ ಬೆಲೆ, ನಿಗದಿತ ಬೆಲೆ, ಪುಸ್ತಕದ ಅಳತೆ ಹಾಗೂ ಇತರೆ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ 2025ರ ಮಾರ್ಚ್ 18ರೊಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಅಥವಾ dpl_dir_acts@yahoo.co.in, directordpl@ka.gov.in ಇ-ಮೇಲ್ ಮೂಲಕ ಮನವಿ ಸಲ್ಲಿಸಬೇಕು. ಕೊನೆಯ ದಿನಾಂಕದ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News