ಕಲಬುರಗಿ | ಷೇರು ಮಾರುಕಟ್ಟೆಯಲ್ಲಿ ನಷ್ಟ; ಕಾಲೇಜು ಉಪನ್ಯಾಸಕ ಆತ್ಮಹತ್ಯೆ

Update: 2025-02-08 17:27 IST
ಕಲಬುರಗಿ | ಷೇರು ಮಾರುಕಟ್ಟೆಯಲ್ಲಿ ನಷ್ಟ; ಕಾಲೇಜು ಉಪನ್ಯಾಸಕ ಆತ್ಮಹತ್ಯೆ
  • whatsapp icon

ಕಲಬುರಗಿ : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ನಷ್ಟ ಅನುಭವಿಸಿದ ಕಾಲೇಜು ಉಪನ್ಯಾಸಕನೊಬ್ಬ ಲಾಡ್ಜ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಿಂಚೋಳಿ ತಾಲೂಕಿನ ಲಿಂಗದಳ್ಳಿ ಗ್ರಾಮ ನಿವಾಸಿ ವೀರಶೆಟ್ಟಿ (43) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ ಎಂದು ತಿಳಿದುಬಂದಿದೆ.

ಬಸವಕಲ್ಯಾಣದ ಪದವಿ ಕಾಲೇಜುವೊಂದರಲ್ಲಿ ಉಪನ್ಯಾಸಕರಾಗಿದ್ದ ವೀರಶೆಟ್ಟಿ, ಷೇರು ಮಾರುಕಟ್ಟೆಯಲ್ಲಿ ಹಣಹೂಡಿಕೆ ಮಾಡಿ ನಷ್ಟ ಅನುಭವಿಸಿರುವುದಾಗಿ ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳ ತಿಳಿಸಿವೆ.

ಈ ಕುರಿತು ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News