ಕಲಬುರಗಿ | ನಾಳೆ (ಎ.16)ರಂದು ಬೃಹತ್ ಉದ್ಯೋಗ ಮೇಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸ್ಥಳ ಪರಿಶೀಲನೆ
Update: 2025-04-15 17:04 IST

ಕಲಬುರಗಿ : ನಾಳೆ ಇಲ್ಲಿನ ಕೆಸಿಟಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಭಾಗದ ಉದ್ಯೋಗ ಮೇಳದ ಸ್ಥಳವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪರಿಶೀಲನೆ ಮಾಡಿದರು.
ಮಂಗಳವಾರ ಮಧ್ಯಾಹ್ನ ಸ್ಥಳಕ್ಕೆ ಭೇಟಿ ನೀಡಿದ ಅವರು, ಉದ್ಯೋಗ ಅರಿಸಿ ಬರುವ ಅಭ್ಯರ್ಥಿಗಳಿಗಾಗಿ ಕೌಂಟರ್, ಊಟದ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಕನೀಝ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಪೊಲೀಸ್ ಕಮೀಷನರ್ ಡಾ.ಶರಣಪ್ಪ ಎಸ್.ಡಿ., ಸಿಇಒ ಭಂವರ್ ಸಿಂಗ್ ಮೀನಾ, ಎಸ್.ಪಿ.ಅಡ್ಡೂರು ಶ್ರೀನಿವಾಸಲು ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.