ಕಲಬುರಗಿ | ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಚಿತ್ತಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ

Update: 2024-12-21 10:58 GMT

ಕಲಬುರಗಿ : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ಸಂಪುಟದಿಂದ ವಜಾ ಮಾಡಿ ಅವರ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರು ಚಿತ್ತಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬಸ್ ನಿಲ್ದಾಣ ವೃತ್ತ, ಬಸವೇಶ್ವರ ವೃತ್ತದ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಲಾಡ್ಜಿಂಗ್ ಕ್ರಾಸ್ ಹತ್ತಿರ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದರು.

ನಂತರ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರು, ವಿವಿಧ ಸಮಾಜದ ಅನೇಕ ಮುಖಂಡರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ಸೇರಿದಂತೆ ಇತರರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News