ಕಲಬುರಗಿ | ಲಾರಿಗೆ ಮ್ಯಾಕ್ಸಿ ಕ್ಯಾಬ್ ಢಿಕ್ಕಿ: ಐವರು ಮೃತ್ಯು
Update: 2025-04-05 09:46 IST

ಕಲಬುರಗಿ: ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.
ಮ್ಯಾಕ್ಸಿಕ್ಯಾಬ್‌ನಲ್ಲಿದ್ದ 31 ಜನರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಮತ್ತು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಮಾಲನ್, ವಾಜೀದ್, ಮೆಹಬೂಬ್ ಬೀ, ಮೆಹಬೂಬ್ ಮತ್ತು ಪ್ರಿಯಾಂಕಾ ಎಂದು ಗುರುತಿಸಲಾಗಿದೆ.
ಬಾಗಲಕೋಟೆಯಿಂದ ಕಲಬುರಗಿ ನಗರದ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ 31 ಜನ ಮ್ಯಾಕ್ಸಿಕ್ಯಾಬ್‌ನಲ್ಲಿ ಬರುತ್ತಿದ್ದರು ಎನ್ನಲಾಗಿದೆ.
ಈ ಕುರಿತು ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.