ಕಲಬುರಗಿ | ಸಿಸಿ ರಸ್ತೆಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

Update: 2025-04-07 22:03 IST
ಕಲಬುರಗಿ | ಸಿಸಿ ರಸ್ತೆಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ
  • whatsapp icon

ಕಲಬುರಗಿ : ನಗರದ ಸೆಂಟ್ರಲ್ ಬಸ್ ಸ್ಟ್ಯಾಂಡ್ ನಿಂದ‌ಕಣ್ಣಿ ಮಾರ್ಕೆಟ್ ವರೆಗೆ 2024-25 ಹಾಗೂ 2025-26ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೊ ನಿಧಿಯಡಿ 1 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿರುವ ಸಿ.ಸಿ‌ ರಸ್ತೆ ಕಮಗಾರಿಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಾರ್ಡ್ ನಂ.43ರ ಎಮ್.ಎಸ್.ಕೆ. ಮಿಲ್ ವಾಣಿಜ್ಯ ಬಡಾವಣೆಯ ಕೇಂದ್ರ ಬಸ್ ನಿಲ್ದಾಣ ಪಕ್ಕದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಯೋಗಾ ಕೇಂದ್ರವನ್ನು ಸಹ ಸಚಿವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕ ಜಗದೇವ್ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರ ಪಾಲಿಕ ಸದಸ್ಯೆ ವರ್ಷಾ ರಾಜೀವ್ ಜಾನೆ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಸೇರಿದಂತೆ ಮತ್ತಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News