ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಚಾಲನೆ

Update: 2024-09-15 04:39 GMT

ಕಲಬುರಗಿ: ನಗರದ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ರಿಂಗ್ ರೋಡ್ ಪ್ರದೇಶದಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಕೆ.ಕೆ.ಆರ್.ಡಿ ಅಧ್ಯಕ್ಷ ಡಾ. ಅಜಯಸಿಂಗ್, ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್, ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾಧಿಕಾರಿ ಫೌಝಿಯಾ ಬಿ. ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಓ, ಪೊಲೀಸ್ ಆಯುಕ್ತರು ಮತ್ತು ಕಲಬುರಗಿ ಎಸ್.ಪಿ, ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಮುಂತಾದವರು ಇದ್ದರು.

ಕಲಬುರಗಿ ಜಿಲ್ಲೆಯ ಗಡಿಭಾಗವಾಗಿರುವ ಕಿಣ್ಣಿ ಸಡಕ್ ದಿಂದ ಆರಂಭವಾಗಿರುವ ಮಾನವ ಸರಪಳಿ ಚಿತ್ತಾಪುರ ತಾಲ್ಲೂಕಿನಲ್ಲಿ ದೇವಲನಾಯಕ ತಾಂಡದ ವರೆಗೆ 113 ಕಿ.ಮಿ. ಉದ್ದ ಏಕಕಾಲದಲ್ಲಿ ಶಾಲಾ ಮಕ್ಕಳು, ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು, ಮಹಿಳೆಯರು, ಸಾರ್ವಜನಿಕರು ದಾಖಲೆ ಪ್ರಮಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವ ಮಹತ್ವ ಸಾರಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News