ಕಲಬುರಗಿ | ಸೇಡಂನಲ್ಲಿ ನ.26ಕ್ಕೆ `ಅಮ್ಮ ಪ್ರಶಸ್ತಿ’ ಪ್ರದಾನ

Update: 2024-11-14 16:19 GMT

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ ಪೆಲತ್ತಡ್ಕ, ಪ್ರಭಾವತಿ ದೇಸಾಯಿ, ವೀರೇಂದ್ರ ರಾವಿಹಾಳ್, ಪೂರ್ಣಿಮಾ ಮಾಳಗಿಮನಿ, ದ್ವಾರನಕುಂಟೆ ಪಾತಣ್ಣ, ಗುರುಪ್ರಸಾದ ಕಂಟಲಗೆರೆ, ಡಾ.ಪರವಿನ ಸುಲ್ತಾನಾ, ಡಾ.ಪ್ರಕಾಶ ಭಟ್, ಡಾ.ಎಚ್.ಎಸ್.ಸತ್ಯನಾರಾಯಣ ಹಾಗೂ ಮಂಜುನಾಥ ಚಾಂದ್ ಅವರ ಕೃತಿಗಳು ಆಯ್ಕೆಯಾಗಿವೆ ಎಂದು `ಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರಶ್ಮಿ ಪೆಲತ್ತಡ್ಕ (ಕೆರೆ-ದಡ), ಪ್ರಭಾವತಿ ದೇಸಾಯಿ (ಸೆರಗಿಗಂಟಿದ ಕಂಪು), ವೀರೇಂದ್ರ ರಾವಿಹಾಳ್ (ಡಂಕಲ್ ಪೇಟೆ), ಪೂರ್ಣಿಮಾ ಮಾಳಗಿಮನಿ (ಮ್ಯಾಜಿಕ್ ಸೌಟು), ದ್ವಾರನಕುಂಟೆ ಪಾತಣ್ಣ (ರಾಣಿ ಅಹಲ್ಯಾಬಾಯಿ ಹೋಳ್ಕರ್), ಗುರುಪ್ರಸಾದ ಕಂಟಲಗೆರೆ (ಅಟ್ರಾಸಿಟಿ), ಡಾ.ಪರವಿನ ಸುಲ್ತಾನಾ (ಶರಣರ ನಾಡಿನ ಸೂಫಿ ಮಾರ್ಗ), ಡಾ.ಪ್ರಕಾಶ ಭಟ್ (ಹಳ್ಳಿಗಳನ್ನು ಕಟ್ಟುವ ಕಷ್ಟ ಸುಖ), ಡಾ.ಎಚ್.ಎಸ್.ಸತ್ಯನಾರಾಯಣ (ಬಿದಿರ ತಡಿಕೆ) ಹಾಗೂ ಮಂಜುನಾಥ ಚಾಂದ್ (ಪ್ರಿಯ ಮೀರಾ) ಕೃತಿಗಳನ್ನು 24ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ 2500 ರೂ. ನಗದು ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ, ಸತ್ಕಾರ ಮತ್ತು ಈ ನೆಲದ ಸಿರಿಧಾನ್ಯ ತೊಗರಿ ಬೇಳೆ ಒಳಗೊಂಡಿರುತ್ತದೆ. ಎಲ್ಲ ವಿಭಾಗದಲ್ಲಿ ಲೇಖಕರು ಪ್ರಶಸ್ತಿಯನ್ನು ಹಂಚಿಕೊಂಡಿದ್ದು, ಇದೇ ನವೆಂಬರ್ 26 ರಂದು ಸೇಡಮ್ನ ಶ್ರೀ ಪಂಚಲಿoಗೇಶ್ವರ ದೇವಾಲಯದ ಶಾಂಭವಿ ರಂಗಮoಟಪದಲ್ಲಿ ಜರುಗುವ ಸಮಾರಂಭದಲ್ಲಿ `ಅಮ್ಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News