ಕಲಬುರಗಿ ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ : ಮೇಯರ್, ಉಪಮೇಯರ್ ಅವಿರೋಧ ಆಯ್ಕೆ

Update: 2024-07-30 08:25 GMT

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರೂರಾದ ಕಲಬುರಗಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಮತ್ತು ಉಪ ಮೇಯರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಪಾಲಿಕೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಮೇಯರ್ ಸ್ಥಾನಕ್ಕೆ ಯಲ್ಲಪ್ಪ ನಾಯಕೋಡಿ ಮತ್ತು ಉಪ ಮೇಯರ್ ಸ್ಥಾನಕ್ಕೆ ಹೀನಾ ಬೇಗಂ ಮುಲ್ಲಾ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಪಾಲಿಕೆಯಲ್ಲಿ ಮರಳಿ ಅಧಿಕಾರದ ಗದ್ದುಗೆ ಹಿಡಿದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News