ಕಲಬುರಗಿ: ವ್ಯಕ್ತಿಯನ್ನು ಹತ್ಯೆಗೈದು ಪೊದೆಯಲ್ಲಿ ಬಿಸಾಕಿದ ಹಂತಕರು; ಪ್ರಕರಣ ದಾಖಲು

Update: 2024-10-17 07:15 GMT

ಕಲಬುರಗಿ: ವ್ಯಕ್ತಿಯೊಬ್ಬನನ್ನು  ಹತ್ಯೆಗೈದು  ಆತನ ಮೃತದೇಹವನ್ನು ಮುಳ್ಳಿನ ಪೊದೆಯಲ್ಲಿ ಬಿಸಾಕಿರುವ ಘಟನೆ ಚಿಂಚೋಳಿ ತಾಲೂಕಿನ ತುಮಕುಂಟಾ ಗ್ರಾಮದ ಹೊರವಲಯದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕೊಲೆಯಾದ ವ್ಯಕ್ತಿಯು ಅಂದಾಜು 30 ವರ್ಷದವನಾಗಿದ್ದು, ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು,  ಮೃತ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಅಲ್ಲಿನ ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪಿಲದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಂಚೋಳಿ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News