ಕಲಬುರಗಿ | ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ : ನ್ಯಾ.ಎಸ್.ನಾಗಶ್ರೀ

Update: 2024-11-16 07:16 GMT

ಕಲಬುರಗಿ : ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಮಸ್ಯೆಗಳ ಇತ್ಯರ್ಥಕ್ಕೆ ಹೆಚ್ಚಿನ ಸಾರ್ವಜನಿಕರು ಒಲವು ತೋರಿಸಬೇಕು ಅದರಲ್ಲೂ ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದು ಉಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಸ್.ನಾಗಶ್ರೀ ಅವರು ಹೇಳಿದರು.

ಜಿಲ್ಲಾನ್ಯಾಯಾಲಯ ಅವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎ.ಡಿ.ಆರ್.ಕಟ್ಟಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಮತ್ತು ಕಲಬುರಗಿ ಜಿಲ್ಲೆಗೆ ಒಳಪಟ್ಟ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಲೋಕ ಅದಾಲತ್‌ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳಿಸಿಕೊಳ್ಳಬಹು ಎಂದರು.

ಕಳೆದ ಬಾರಿ ನಡೆಸಿದ ಲೋಕ ಅದಾಲತ್‌ನಲ್ಲಿ ಒಟ್ಟು 1 ಲಕ್ಷದ 9,696 ಪ್ರಕರಣಗಳು ಇನ್ನು ಬಾಕಿ ಇದ್ದು ಕಾರಣಾಂತರಗಳಿಂದ ಬಾಕಿ ಉಳಿದ ಪಕ್ರರಣಗಳನ್ನು ಈ ಬಾರಿಯ ಲೋಕ ಅದಾಲತ್‌ನಲ್ಲಿ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿ ನ್ಯಾ.ನಾಗಶ್ರೀ ಅವರು, ಕಲಬುರಗಿ ಜಿಲ್ಲಾ ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ಬಾಕಿ ಇದ್ದು, ಈ ಜಿಲ್ಲೆಯಲ್ಲಿ ಗರಿಷ್ಠ ಪ್ರಕರಣಗಳು ಇತ್ಯರ್ಥಪಡಿಸುವ ಗುರಿಯನ್ನು ಪ್ರಾಧಿಕಾರ ಇಟ್ಟುಕೊಂಡಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News