ಕಲಬುರಗಿ | ಜ.11ರಂದು ಜಿ.ಎಸ್.ಸಿದ್ದಲಿಂಗಯ್ಯಗೆ ʼಬಸವ ಪ್ರಶಸ್ತಿ ಪ್ರದಾನʼ : ಶರಣಗೌಡ ಪಾಟೀಲ

Update: 2025-01-08 11:30 GMT

ಕಲಬುರಗಿ : ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನೀಡುವ 2025ನೇ ಸಾಲಿನ ರಾಜ್ಯಮಟ್ಟದ 'ಬಸವ ಪ್ರಶಸ್ತಿ'ಯನ್ನು ಹಿರಿಯ ಸಾಹಿತಿ, ಕವಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷ ಪ್ರೊ.ಜಿ.ಎಸ್. ಸಿದ್ಧಲಿಂಗಯ್ಯ ಅವರಿಗೆ ನೀಡಲಾಗುತ್ತಿದೆ ಎಂದು ಟ್ರಸ್ಟ್ ನ ಅಧ್ಯಕ್ಷರಾದ ಶರಣಗೌಡ ಪಾಟೀಲ ಪಾಳಾ ಮತ್ತು ಟ್ರಸ್ಟ್ ಹಿತೈಷಿ ಡಾ.ಆನಂದ ಸಿದ್ದಾಮಣಿ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಜಂಟಿಯಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿಯು 50 ಸಾವಿರ ರೂ. ನಗದು ಹಣ ಮತ್ತು ಫಲಕವನ್ನು ಒಳಗೊಂಡಿದೆ. ಜ.11ರಂದು ಬೆಂಗಳೂರು ನಗರದಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸುತ್ತೂರಿನ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಿಎಂ ಸಲಹೆಗಾರ, ಆಳಂದ ಶಾಸಕ ಬಿ.ಆರ್. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಟ್ರಸ್ಟ್ ನ ಗೌರವ ಸಲಹೆಗಾರರಾದ ಪ್ರೊ. ಎಸ್.ಜಿ.ಸಿದ್ಧರಾಮಯ್ಯನವರು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಕೆ.ವಿ.ನಾಗರಾಜ ಮೂರ್ತಿ, ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ.ಬಸವರಾಜ ಸಾದರ, ಲೇಖಕ ಡಾ.ರುದ್ರೇಶ ಅದರಂಗಿ, ಡಾ.ವೀರಶೆಟ್ಟಿ ಬಿ ಗಾರಂಪಳ್ಳಿ ಅವರು ಭಾಗವಹಿಸಲಿದ್ದಾರೆ. ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ ಅವರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಟ್ರಸ್ಟ್ ಅಧ್ಯಕ್ಷರಾದ ಶರಣಗೌಡ ಪಾಟೀಲ ಪಾಳಾ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ ಎಂದರು.

ಸಮಾರಂಭದಲ್ಲಿ ಮೃತ್ಯುಂಜಯ ದೊಡ್ಡವಾಡ ಮತ್ತು ಸವಿತ ಪ್ರಸಾದ್ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಿದ್ದಣಗೌಡ ಕಡಣಿ, ಸಿ.ಎಸ್.ಮಾಲಿ ಪಾಟೀಲ, ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News