ಕಲಬುರಗಿ | ಫೆ.3 ರಂದು ಫೋನ್ ಇನ್ ಕಾರ್ಯಕ್ರಮ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಚಿಂಚೋಳಿ, ಸೇಡಂ, ಚಿತ್ತಾಪೂರ, ಕಾಳಗಿ ಹಾಗೂ ಶಹಾಬಾದ್ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯದ ಕುರಿತು ಅಹವಾಲುಗಳನ್ನು ಸ್ವೀಕರಿಸಲು ಫೆ.3 ರಂದು ಸೋಮವಾರ ಮಧ್ಯಾಹ್ನ 3.30 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ವಿಭಾಗ-1 ರಲ್ಲಿ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ಗ್ರಾಮಕ್ಕೆ ಬಸ್ ಸರಿಯಾಗಿ ಬಾರದೇ ಇದ್ದಲ್ಲಿ, ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಹತ್ತಿಸಿಕೊಳ್ಳದಿದ್ದಲ್ಲಿ, ಬಸ್ಗಳ ಕೊರತೆ ಮತ್ತು ತಮ್ಮ ಊರು/ಬಡಾವಣೆಯಲ್ಲಿ ಬಸ್ ನಿಲ್ಲದಿರುವ ಕುರಿತು ಮೇಲ್ಕಂಡ ದಿನದಂದು ಮೊಬೈಲ್ ಸಂಖ್ಯೆ 6366423879 ಗೆ ಕರೆಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.