ಕಲಬುರಗಿ | ತೊಗರಿ ಬೆಳೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Update: 2024-12-21 09:53 GMT

ಕಲಬುರಗಿ : ತೊಗರಿ ಬೆಳೆ ಪರಿಹಾರಕ್ಕೆ ಆಗ್ರಹಿಸಿ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಬಾರಿ ಅತಿವೃಷ್ಟಿಯಿಂದ ರೈತರು ಕಂಗಾಲಾಗಿದ್ದಾರೆ. ತೊಗರಿ ಬೆಳೆ ನೆಟೆ ಹೋಗಿದೆ. ಎಕರೆಗೆ 25 ಸಾವಿರ ರೂ. ಪರಿಹಾರ ಧನ ನೀಡಬೇಕು. ಆದಷ್ಟು ಬೇಗ ಬೆಳೆ ಹಾನಿಯ ಸಮೀಕ್ಷೆ ನಡೆಸಬೇಕು. ಪ್ರತಿವರ್ಷ ರೈತರು ಒಂದಲ್ಲಾ ಒಂದು ರೀತಿಯಲ್ಲಿ ಹೈರಾಣಾಗುತ್ತಿದ್ದಾರೆ. ಸರಕಾರವು ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಲಾಯಿತು.

ಇಷ್ಟಲ್ಲದೇ ಉದ್ಯೋಗ ಖಾತ್ರಿ ಕೆಲಸದ ಜಾರಿಯಲ್ಲಾಗುತ್ತಿರುವ ಸಮಸ್ಯೆಗಳ ಕುರಿತು ಸಹಾಯಕ ನಿರ್ದೇಶಕರೊಂದಿಗೆ ಸಮಾಲೋಚನೆ ಮಾಡಲಾಯಿತು. ಸಮಸ್ಯೆಗಳ ಪರಿಹರಿಸಿ ಶೀಗ್ರದಲ್ಲಿ ಜಾಬ್ ಕಾರ್ಡ್ ಎಲ್ಲರಿಗೂ ಸಿಗಬೇಕೆಂದು ಆಗ್ರಹಿಸಲಾಯಿತು.

ಸ್ಥಳಕ್ಕಾಗಮಿಸಿದ ಸಹಾಯಕ ನಿರ್ದೇಶಕರು ಒಂದು ವಾರದಲ್ಲಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮಂತ ಬಿರಾದಾರ, ವೀರುಪಾಕ್ಷಪ್ಪ ತಡಕಲ್, ಜನವಾದಿ ಮಹಿಳಾ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಕೆ.ನೀಲಾ, ಅನಿತಾ ಮರಗುತ್ತಿ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(DYFI) ನ ರಾಜ್ಯ ಅದ್ಯಕ್ಷರಾದ ಲವಿತ್ರ ವಸ್ತ್ರದ್ ಹಾಗೂ ದಿಲ್ ಶಾದ ಮತ್ತು ಗ್ರಾಮದ ಪ್ರಮುಖರು ಹಾಜರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News