ಕಲಬುರಗಿ | ಅಮಿತ್ ಶಾರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

Update: 2024-12-26 10:41 GMT

ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಡಿ.17ರಂದು ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ತೀವ್ರವಾಗಿ ಅವಮಾನ ಮಾಡಿದ್ದಾರೆ. ಸಂವಿಧಾನದ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ, ಇದನ್ನು ನಮ್ಮ ನೌಕರರ ಸಂಘ ಖಂಡಿಸುತ್ತದೆ ಎಂದು ಪ್ರತಿಭಟನಾನಿರತರು ಘೋಷಣೆ ಕೂಗಿದರು.

ಬಿಜೆಪಿ ಸಂವಿಧಾನದ ಮೇಲೆ ದಾಳಿ ಮಾಡುತ್ತಾ ತನ್ನ ಆಡಳಿತ ನಡೆಸುತ್ತಿದೆ, ಅಲ್ಲದೆ ದೇಶದಲ್ಲಿ ಮನುವಾದಿ ಸಿದ್ಧಾಂತವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಈ ತರಹದ ಪ್ರಯತ್ನಗಳಿಗೆ ನಾವು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸೌಹಾರ್ದ ಭಾರತದಲ್ಲಿ ಈ ತರಹದ ಕ್ರಿಯೆಗೆ ನಾವು ಒಪ್ಪುವುದಿಲ್ಲ. ಈ ಕೂಡಲೇ ಡಾ.ಅಂಬೇಡ್ಕರ್ ಅವರಿಗೆ ಅವಮಾನಿಸಿರುವ ಅಮಿತ್ ಶಾ ರಾಜೀನಾಮೆ ಕೊಡಬೇಕು, ಇಲ್ಲದಿದ್ದರೆ ರಾಷ್ಟ್ರಪತಿಗಳು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾಧ್ಯಕ್ಷ ಪರಶುರಾಮ್ ಹಡಲಗಿ, ಮೇಘರಾಜ್ ಕಠಾರೆ, ಕಾಶಿನಾಥ್ ಬಂಡಿ, ಜ್ಯೋತಿ ದೊಡ್ಡಮನಿ, ನಾಗರತ್ನ ಮದನ್ ಕರ್, ಕಲ್ಯಾಣಿ ಪೂಜಾರಿ, ತುಳಜಪ್ಪ ಹೊಡೆಬೀರನಹಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News