ಕಲಬುರಗಿ | ಮಕ್ಕಳಿಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿ : ಲಾಲಂ ಚೌಧರಿ

ಕಲಬುರಗಿ : ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದ ಜೊತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಲು ಸಾಧ್ಯ ಎಂದು ಶಿವೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಲಾಲಂ ಚೌಧರಿ ಹೇಳಿದರು.
ಅಫಜಲಪುರ ತಾಲೂಕಿನ ಶಿವೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೆಹ ಸಮ್ಮೇಳನ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮದಲ್ಲಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಆಟದೊಂದಿಗೆ ಪಾಠ ಕಲಿಸುವ ಪ್ರವೃತ್ತಿ ಮೈಗೂಡಿಸಿಕೊಂಡು ಬೋಧಿಸಿದಾಗ ತಮಗೂ ಶಿಕ್ಷಣದ ಮಹತ್ವ ತಿಳಿಯುವುದರ ಜತೆಗೆ ಸರಳ ಬೋಧನೆಗೆ ಸಹಕಾರಿಯಾಗಲಿದೆ. ಪಾಲಕರು ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯ ಎಂದರು.
ಹಿರಿಯರಾದ ಸುರೇಶ ಕುಲಕರ್ಣಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತ್ತು. ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಬಸಯ್ಯ ಹಿರೇಮಠ ಅವರು ಜ್ಯೊತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿಗಳಾದ ಪರಮೇಶ್ವರ ಜಮಾದಾರ, ಬಸವರಾಜ ಹಿರೇಮಠ, ಹಣಮಂತ ನಾಯ್ಕೋಡಿ, ಪ್ರೌಢ ಶಾಲೆಯ ವಿಜ್ಞಾನ ವಿಷಯ ಶಿಕ್ಷಕರು ಸಿದ್ದನಗೌಡ ಪಾಟೀಲ, ಕಾಶಿನಾಥ ಹೂನ್ನಳಿ, ನಿಲಪ್ಪ ಜಮಾದಾರ, ಉಸ್ಮಾನ ಮುಲ್ಲಾ ಸೇರಿದಂತೆ ಶಾಲಾ ಸಿಬ್ಬಂದಿ ಊರಿನ ಹಿರಿಯರು ಮಹಿಳೆಯರು ಉಪಸ್ಥಿತಿತರಿದ್ದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೆಳೆಯಿತು.