ಕಲಬುರಗಿ | ಪಿಯುಸಿ ಟಾಪರ್ ಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರಿಂದ ಸನ್ಮಾನ
Update: 2025-04-10 14:45 IST

ಕಲಬುರಗಿ: ಕಳೆದ 2024-2025ನೇ ಸಾಲಿನ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಷಯಗಳಲ್ಲಿ ಜಿಲ್ಲೆಗೆ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಬುಧವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.
ಕಲಾ ವಿಭಾಗದಲ್ಲಿ 600ಕ್ಕೆ 589 ಅಂಕಗಳನ್ನು ಗಳಿಸಿದ ಚಿತ್ತಾಪೂರ ನಾಗಾವಿ ಇ.ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಾಗರತ್ನ, ವಾಣಿಜ್ಯ ವಿಭಾಗದಲ್ಲಿ 600ಕ್ಕೆ 596 ಅಂಕಗಳಿಸಿರುವ ಕಲಬುರಗಿಯ ಗುರುಕುಲ್ ಪಿಯು ಕಾಲೇಜು ವಿದ್ಯಾರ್ಥಿ ಸೀಯಾ ಹಾಗೂ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 592 ಅಂಕಗಳನ್ನು ಗಳಿಸಿರುವ ಕಲಬುರಗಿಯ ಬಾಲಕಿಯರ ಪಿಯು ಕಾಲೇಜಿನ ವಿದ್ಯಾರ್ಥಿ ಬಿ.ಬಿ.ಸಫಿಯಾ ಅವರನ್ನು ಸನ್ಮಾನಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಅಶೋಕ ಶಾಸ್ತ್ರಿ ಸೇರಿದಂತೆ ಇನ್ನಿತರು ಇದ್ದರು.