ಕಲಬುರಗಿ | ವೃದ್ಧೆಯ ಅತ್ಯಾಚಾರ : ಆರೋಪಿ ಪರಾರಿ
Update: 2024-11-19 12:21 GMT
ಕಲಬುರಗಿ : ವ್ಯಕ್ತಿಯೋರ್ವ ಮನೆಗೆ ನುಗ್ಗಿ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಮನೆಗೆ ನುಗ್ಗಿ ಒಬ್ಬಂಟಿಯಾಗಿದ್ದ 75 ವರ್ಷದ ವೃದ್ದೆ ಮೇಲೆ ಅತ್ಯಾಚಾರ ಎಸಗಲಾಗಿದೆ.
ಭಿಕ್ಷೆ ಬೇಡುತ್ತಾ ಅಲೆಯುತ್ತಿದ್ದ ಆರೋಪಿಯು, ವೃದ್ದೆ ಮೇಲೆ ಅತ್ಯಾಚಾರವೆಸಗಿದ ಬಳಿಕ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆಂದು ತಿಳಿದು ಬಂದಿದೆ.
ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.